11:37 PM Thursday14 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ

04/10/2024, 20:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ- 2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೋಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಮಾಡುವಾಗ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು