ಇತ್ತೀಚಿನ ಸುದ್ದಿ
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ, ನಗರಾಭಿವೃದ್ಧಿ ಇಲಾಖೆ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
06/08/2022, 20:14
ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com
ಸುಮಾರು 30 ವರ್ಷಗಳು ಕಳೆದಿದ್ದರೂ , ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಓದಗಿಸುವಲ್ಲಿ ವಿಫಲಾಗಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಾಜ್ಯ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣ ಮಾಡಿರುವ ಶ್ರೀ ದೇವರಾಜ ಅರಸು ಬಡಾವಣೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ವಿಫಲವಾಗಿರುವ ಬಗ್ಗೆ ವಿಚಾರಣೆ ನಡೆಸಿ ಬಡಾವಣೆ ನಿರ್ಮಾಣಗೊಂಡು ಸುಮಾರು 30 ವರ್ಷಗಳು ಕಳೆದಿದ್ದರೂ , ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಓದಗಿಸುವಲ್ಲಿ ವಿಫಲಾಗಿರುವ ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸರ್ಕಾರದ ಕಾರ್ಯದರ್ಶಿಗಳು , ನಗರಾಭಿವೃದ್ಧಿ ಇಲಾಖೆ , ವಿಕಾಸ ಸೌಧ ವಿರುದ್ಧ ಸ್ವಯಂ ಪ್ರೇರಿತರಾಗಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ತಿಳಿಸಿದೆ.














