10:06 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಸಂಭ್ರಮ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

15/08/2024, 21:06

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸ್ವಾತಂತ್ರ್ಯ ದಿನದ ಅಂಗವಾಗಿ ನಗರದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ನಗರಾಧಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎಸ್. ಸುರೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದ ಬಳಿಕ ಸಂದೇಶ ನೀಡಿದರು.


ಸರ್ಕಾರ ಜನರಿಗೆ ನೀಡಿದ ಭರವಸೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗಿದೆ. ಕೋಲಾರ ಜಿಲ್ಲೆಗೆ ಭರಪೂರ ಅನುದಾನ ಒದಗಿಸಲು ಶ್ರಮ ವಹಿಸಲಾಗಿದೆ. ಒಳಚರಂಡಿ ಜಾಲ, ಗೃಹ ಸಂಪರ್ಕಕ್ಕಾಗಿ ಕೋಲಾರ ನಗರಕ್ಕೆ 60 ಕೋಟಿಗಳ ಅನುದಾನ, ರಾಬರ್ಟ್ ಸನ್ ಪೇಟೆ ಅಭಿವೃದ್ಧಿಗೆ 20 ಕೋಟಿ ಅನುದಾನ ಅನುಮೋದನೆ ಮಾಡಲಾಗಿದೆ. ವೇಮಗಲ್ ಕುರಗಲ್ ನಲ್ಲಿ ವಿವಿಧ ಯೋಜನೆಗಳಿಗಾಗಿ 3.50 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ರೊಚ್ಚು ಸಂಸ್ಕಾರಣಾ ಘಟಕ ನಿರ್ಮಾಣಕ್ಕಾಗಿ 25.11 ಕೋಟಿ ಅನುದಾನ ಮೀಸಲು ಇಡಲಾಗಿದೆ. ಅಮೃತ್ 2.0 ಯೋಜನೆಯಡಿಯಲ್ಲಿ ನೀರು ಸರಬರಾಜು ಮತ್ತು ಹಸಿರು ವಲಯ ಹಾಗೂ ಪಾರ್ಕ್ ಗಳಿಗಾಗಿ ಜಿಲ್ಲೆಗೆ 40 ಕೋಟಿ ಅನುದಾನ ನೀಡಲಾಗಿದೆ. ಯಾರಗೊಳ್ ಆಣೆಕಟ್ಟಿನಿಂದ ಬಂಗಾರಪೇಟೆ, ಕೋಲಾರ ಹಾಗೂ ಮಾಲೂರು ತಾಲ್ಲೂಕುಗಳ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಇದಕ್ಕಾಗಿ 308.46 ಕೋಟಿ ವೆಚ್ಚ ಮಾಡಲಾಗಿದೆ. ಎಂದರು.
ಕೋಲಾರ ನಗರದ ಹೊರವಲಯದಲ್ಲಿ ಹೊರವರ್ತುಲ ರಸ್ತೆ ಅಭಿವೃದ್ಧಿಗೆ 100 ಕೋಟಿ ಅನುದಾನ ಅಂದಾಜಿಸಲಾಗಿದೆ. ಈ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
ಹಳೇ ಬಸ್ ನಿಲ್ದಾನವನ್ನು ನವೀಕರಣ ಮಾಡಲು 5 ಕೋಟಿಗಳ ಅನುದಾನ ಮಂಜೂರು ಮಾಡಲಾಗಿದೆ. ಬಂಗಾರಪೇಟ್, ಕೋಲಾರ ನಗರಗಳಲ್ಲಿ ಪಾದಚಾರಿ ಮಾರ್ಗ ಹಾಗೂ ಕೋಲಾರ ಚಿಕ್ಕಬಳ್ಳಾಪುರ ರಸ್ತೆ ಪಾದಚಾರಿ ಮಾರ್ಗ ಅಭಿವೃದ್ಧಿಗೆ 12 ಕೋಟಿ ಅನುದಾನ ಒದಗಿಸಲಾಗುವುದು. ಇಂತಹ ವಿಶೇಷ ಅನುದಾನಗಳನ್ನು ಜಿಲ್ಲೆಗೆ ಒದಗಿಸಲಾಗಿದೆ ಎಂದು ಅವರು‌ ನುಡಿದರು.
ಜಿಲ್ಲೆಯಲ್ಲಿ ಇಲಾಖೆವಾರು ಪ್ರಗತಿಯ ವಿವರಗಳನ್ನು ತೆರೆದಿಟ್ಟರು.
ನಂತರ ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಂದು ವರ್ಷದ ಅಭಿವೃದ್ಧಿ ಕಾರ್ಯಕ್ರಮಗಳ ಸಾಧನಾ ಕೈಪಿಡಿ ಬಿಡುಗಡೆ ಮಾಡಲಾಯಿತು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕ್ರೀಡಾಂಗಣ ನವೀಕರಣ, ಕಾಮಗಾರಿ ಉದ್ಘಾಟನೆ,ತೋಟಗಾರಿಕೆ ಇಲಾಖೆಯ 2000 ಮೇ. ಟನ್ ಸಾಮರ್ಥ್ಯದ ಶೀತಲ ಗೃಹ ಶಂಕುಸ್ಥಾಪನೆ, ನಿರ್ಮಿತಿ ಕೇಂದ್ರದ ಶಾಲಾ ಕಟ್ಟಡ, ಕೋದಂಡ ರಾಮಸ್ವಾಮಿ ದೇವಸ್ಥಾನ, ಸಾರ್ವಜನಿಕ ಸಂಪರ್ಕ ಕೇಂದ್ರ, ಕಂದಾಯ ನ್ಯಾಯಾಲಯ ಕಟ್ಟಡ, ಅಂಬೇಡ್ಕರ್ ಭವನ, ಅಟಲ್ ಜಿ ಜನಸ್ನೇಹಿ ಕೇಂದ್ರ ಕಟ್ಟಡ, ಕಂದಾಯ ಇಲಾಖೆಯ 2 ಹೊಸ ನಾಡ ಕಚೇರಿ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಸಮಾರಂಭದಲ್ಲಿ ಕೋಲಾರ ಜಿಲ್ಲಾ ಶಾಸಕ ಡಾ. ಕೊತ್ತೂರ್ ಮಂಜುನಾಥ್ ಅವರು ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ವಿಧಾನ ಪರಿಷತ್ ಶಾಸಕರು ಹಾಗೂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಸಂಸದ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಶಾಸಕರಾದ ಇಂಚರ ಗೋವಿಂದರಾಜು, ಎಂ. ಎಲ್. ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್ ಸ್ಥಳೀಯ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು