10:23 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಕೋಲಾರ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ಹಾವಳಿ: ಆಹಾರದಿಂದ ಔಷಧಿವರೆಗೂ ಬೇಕು ಬ್ರೋಕರ್ ಗಳು!

08/02/2022, 09:25

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿನ ದಲ್ಲಾಳಿಗಳಿಗೆ ಹಾವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸುವಂತೆ ರೈತ ಸಂಘದಿಂದ ಶಸ್ತ್ರಚಿಕಿತ್ಸಕಾರಿಗಳಾದ ಡಾ . ರಘುನಾಥ್‌ ರೆಡ್ಡಿ ಅವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು. 

ಜನನ ಪ್ರಮಾಣ ಪತ್ರದಿಂದ ಮರಣ ಪ್ರಮಾಣ ಪತ್ರದವರೆಗೆ ಆಹಾರದಿಂದ ಔಷಧಿಗಳವರೆಗೂ ಬಡವರು ಪಡೆಯಬೇಕಾದರೆ ಜಿಲ್ಲಾಸ್ಪತ್ರೆಯಲ್ಲಿ ದಲ್ಲಾಳಿಗಳ ನೆರಳು ಇಲ್ಲದೆ ಬಡವರಿಗೆ ಗುಣಮಟ್ಟದ ಚಿಕಿತ್ಸೆ ದೊರೆಯುತ್ತಿಲ್ಲವೆಂದು ಅವ್ಯವಸ್ಥೆ ವಿರುದ್ಧ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದರು . ಮನವಿ ನೀಡಿ ಮಾತನಾಡಿದವರು ೧೦೦ ಹಾಸಿಗೆಗಳ ಆಸ್ಪತ್ರೆ ಬಡ ಹೆಣ್ಣು ಮಕ್ಕಳ ಪಾಲಿಗೆ ಇದ್ದು ಇಲ್ಲದಂತಾಗಿದೆ . ಹೆರಿಗೆಗೆ ಬರುವ ಬಡವರಿಗೆ ನೂರೊಂದು ನೆಪ ಹೇಳಿ ಖಾಸಗಿ ಆಸ್ಪತ್ರೆಗಳ ರವಾನೆ ಮಾಡುವ ದಂದೆ ಜೊತೆಗೆ ಹೆರಿಗೆ ವಿಭಾಗದಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಜೊತೆಗೆ ಮಕ್ಕಳ ವಾರ್ಡ್‌ಗಳಲ್ಲಿ ಸ್ಟೀನ್‌ಗಳಿಲ್ಲದೆ ಮಕ್ಕಳಿಗೆ ಹಾಲುಣಿಸಲು ಕಷ್ಟವಾಗುತ್ತದೆಂದು ವಿವರಿಸಿದರು . ಕೋಲಾರ ತಾಲ್ಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌ ಮಾತನಾಡಿ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಅನಧೀಕೃತ ಅಂಗಡಿ ಮಳಿಗೆಗಳ ಹೆಚ್ಚಾಗಿ ಹೆಚ್ಚಿನ ಬೆಲೆಗೆ ಮಾರಾಟಮಾಡುವ ಟೆಂಡರ್ ಇಲ್ಲದ ಅಮಗಡಿಗಳನ್ನು ತೆರೆವುಗೊಳಿಸಬೇಕೆಂದು ಒತ್ತಾಯ ಜೊತೆಗೆ ಮಾಡಿದರು.

ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ೧೨ ಜನರ ೫ ತಿಂಗಳ ವೇತನ ಜೊತೆಗೆ ಪಿ.ಎಪ್ ಇ , ಎಸ್ , ಐ ನೀಡದೇ ಯಾವುದೇ ಮೂಲ ಭೂತ ಸೌಕರ್ಯಗಳನ್ನು ಒದಗಿಸದೆ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕೊಡಿಸಬೇಕು ಮತ್ತು ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಒತ್ತಾಯಿಸಿದರು . ಮನವಿ ಸ್ವೀಕರಿಸಿದ ಮಾತನಾಡಿದ ಡಾ . ರಘುನಾಥ್‌ರೆಡ್ಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ದಲ್ಲಾಳಿಗಳ ಹವಳಿಗೆ ಕಡಿವಾಣ ಹಾಕಿ ಅನಧಿಕೃತ ಅಂಗಡಿ ಮಳಿಗೆ ತೆರೆವುಗೊಳಿಸಿ , ಬಡ ಕಾರ್ಮಿಕರಿಗೆ ವೇತನ ಕೊಡುವ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದರು . ಮನವಿ ನೀಡುವಾಗ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ , ಜಿಲ್ಲಾದ್ಯಕ್ಷ ಐತಾಂಡಹಳ್ಳಿ ಮಂಜುನಾಥ್ , ಐತಾಂಡಹಳ್ಳಿ ಮುನ್ನಾ , ವಕ್ಕಲೇರಿ ಹನುಮಯ್ಯ , ಯಲ್ಲಪ್ಪ , ಯಾರಂಗಟ್ಟ ಗೀರೀಶ್ , ಕುವಣ್ಣ , ಸುರೇಶ್‌ಬಾಬು , ಮಂಜುನಾಥ್ , ಮುಂತಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು