4:24 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು