5:55 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕೊಲ್ಲೂರು ಅರಶಿನಗುಂಡಿ ಜಲಪಾತಕ್ಕೆ ಬಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ: ಬಿದ್ದ ಜಾಗದಿಂದ ಕೇವಲ 10 ಮೀಟರ್ ಅಂತರದಲ್ಲಿ ದೊರೆತ ಶವ

30/07/2023, 23:09

ಕುಂದಾಪುರ(reporterkarnataka.com):ವಾರದ ಹಿಂದೆ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದ ಕಲ್ಲು ಬಂಡೆಯಿಂದ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕನ ಶವ ಪತ್ತೆಯಾಗಿದೆ.
ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು ಜುಲೈ 23ರಂದು ಶರತ್ ಕುಮಾರ್ (23) ಸ್ನೇಹಿತನೊಂದಿಗೆ ಬಂದಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಕಾಲು ಜಾರಿ ನೀರಿಗೆ ಬಿದ್ದಿದ್ದರು. ಮರುಕ್ಷಣವೇ ಅವರು ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದರು. ಹಲವು ತಂಡಗಳ ಮೂಲಕ ಶರತ್ ಹುಡುಕಾಟ ನಡೆದಿತ್ತು. ಬಿರುಸಿನ ಮಳೆ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.
ಇದೀಗ ಜುಲೈ 30ರಂದು ಶರತ್ ಅವರ ಮೃತದೇಹ ಅವರು ಬಂಡೆಯಿಂದ ಜಾರಿ ಬಿದ್ದ ಸ್ಥಳದಿಂದ ಕೇವಲ 10 ಮೀಟರ್ ದೂರದಲ್ಲಿ ಪತ್ತೆಯಾಗಿದೆ.
ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು