12:48 PM Wednesday23 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಕೋಮು ಪ್ರಚೋದನೆ ಆರೋಪ: ಚೈತ್ರಾ ಕುಂದಾಪುರ ವಿರುದ್ದ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲು

08/10/2021, 16:10

ಮಂಗಳೂರು(reporterkarnataka.com):

ಸುರತ್ಕಲ್‌ನಲ್ಲಿ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ಎಂಬವರ ಮೇಲೆ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಮಾವೇಶದಲ್ಲಿ ಚೈತ್ರಾ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು ಎಂದು ರಾಜ್ಯ ಕಾಂಗ್ರೆಸ್ ಸಂಯೋಜಕ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.

ಚೈತ್ರಾ ಕುಂದಾಪುರ ಮತ್ತು ಕಾರ್ಯಕ್ರಮ ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.
ಕೋಟಿ ಚೆನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ ಎಂದು ಚಿತ್ತರಂಜನ್ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು