ಇತ್ತೀಚಿನ ಸುದ್ದಿ
ಕೊಣಾಜೆ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯ
17/07/2022, 10:25
ಉಳ್ಳಾಲ(reporterkarnataka.com): ತಪ್ಪಿಸಿಕೊಳ್ಳಲು ಯತ್ನಿಸಿದ ಹಳೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳ್ಳಂಬೆಳಗೆ ನಗರದ ಹೊರವಲಯದ ಕೊಣಾಜೆ ಬಳಿ ನಡೆದಿದೆ.
ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯಗಳಾಗಿವೆ. ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಫೈರಿಂಗ್ ಮಾಡಿದ್ದಾರೆ. ಆತನಿಗೆ ಗಾಯವಾಗಿದ್ದು ಆಸ್ಪತ್ರೆ ಗೆ ದಾಖಲಿಸಲಾಗಿದೆ. ಆತನ ವಿರುದ್ಧ 15 ಪ್ರಕರಣಗಳಿದ್ದು, 6 ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಆತನನ್ನು ಬಂಧಿಸಲಾಗಿರಲಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ತಿಳಿಸಿದ್ದಾರೆ