11:53 PM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ… ಇಂಗಾಲಮುಕ್ತ ಸರಕು ಸಾಗಣೆ ಪ್ರಧಾನಿ ಮೋದಿ ಅವರ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು