4:02 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು