3:50 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು: ನಿವೃತ್ತ ನ್ಯಾಯಾಧೀಶರಿಂದ ತನಿಖೆ

09/07/2025, 17:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಪ್ಪ ಪಟ್ಟಣದ ಮೊರಾರ್ಜಿ‌ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಆರಂಭಗೊಂಡಿದ್ದು, ವಸತಿ ಶಾಲೆಯ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತು ಮಾಡಲಾಗಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ
ವಸತಿ ಶಾಲೆಯ ಪ್ರಿನ್ಸಿಪಾಲ್ ರಜನಿ ಹಾಗೂ ವಾರ್ಡನ್ ಸುಂದರ್ ನಾಯಕ್ ಅವರನ್ನು ಅಮಾನತು ಮಾಡಿದೆ.
ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕ ಕಾಂತರಾಜು ಅವರು ಈ ಅಮಾನತು ಆದೇಶ ಹೊರಡಿಸಿದ್ದಾರೆ.


2023 ಜುಲೈ 27ರಂದು ಅಮೂಲ್ಯ, 2025 ಜೂನ್ 29ರಂದು ಶಮಿತಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ವಿದ್ಯಾರ್ಥಿನಿಯರು 9ನೇ ತರಗತಿಯವರು ಆಗಿದ್ದರು. ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ತನಿಖೆ ನಡೆಸುವಂತೆ ಸ್ಥಳೀಯರು, ಸಾರ್ವಜನಿಕರು ಆಗ್ರಹಿಸಿದ್ದರು
ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶದ ಬೆನ್ನಲ್ಲೇ ಅಮಾನತು ಆದೇಶ ಹೊರಡಿಸಲಾಗಿದೆ. ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು