12:48 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಕೊಪ್ಪಳ: ಬಲ್ದೋಟ್ ಸ್ಟೀಲ್ ಆ್ಯಂಡ್ ಪವರ್ ಲಿಮಿಟೆಡ್ ಕಂಪನಿ ಸ್ಥಾಪನೆಗೆ ಬೆಂಬಲ ನೀಡುವಂತೆ ಸಿಎಂಗೆ ಮನವಿ

08/03/2025, 15:33

ಕೊಪ್ಪಳ(reporterkarnataka.com): ಬಲ್ದೋಟ್ ಸ್ಟೀಲ್ ಆ್ಯಂಡ್ ಪವರ್ ಲಿಮಿಟೆಡ್ ಕಂಪನಿಯ ಸ್ಥಾಪನೆಗೆ ಬೆಂಬಲ ನೀಡುವಂತೆ ದಲಿತ ಸಂಘಟನಾ ಸಮಿತಿ, ಭೀಮ ಘರ್ಜನೆ ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಕುರಿತು ದಲಿತ ಸಂಘಟನಾ ಸಮಿತಿ, ಭೀಮ ಘರ್ಜನೆ ಸಂಘಟನೆ ಪತ್ರಿಕಾ ಪ್ರಕಟಣೆ ನೀಡಿದ್ದು, ಕೊಪ್ಪಳವು ಕಲ್ಯಾಣ ಕರ್ನಾಟಕದ ಒಂದು ಅವಿಭಾಜ್ಯ ಅಂಗವಾಗಿದೆ. ಈಗ ತಾನೇ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಒಂದು ಪ್ರದೇಶವು ಸಮಗ್ರ ಅಭಿವೃದ್ಧಿ ಹೊಂದಬೇಕಾದರೆ ವಾಣಿಜ್ಯ ವ್ಯವಹಾರಗಳು ವೃದ್ಧಿಯಾಗಬೇಕು, ಈ ನಿಟ್ಟಿನಲ್ಲಿ ಕಾರ್ಖಾನೆಗಳು ಅತಿ ಮುಖ್ಯ ಪಾತ್ರ ವಹಿಸುತ್ತವೆ. ಇದರಿಂದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಉದ್ಯೋಗವಕಾಶಗಳು ಹೆಚ್ಚುತ್ತವೆ.
ಈಗಾಗಲೇ ಬಲ್ದೋಟ್ ಅಂಗ ಸಂಸ್ಥೆಯಾದ MSPL ಕಂಪನಿಯು ಅಗತ್ಯವಿರುವ ಉನ್ನತ ಮಟ್ಟದ ಮಾಲಿನ್ಯ ಯಂತ್ರೋಪಕರಣಗಳನ್ನು ಅಳವಡಿಸಿ ಪರಿಸರ ಮಾಲಿನ್ಯ ಕಡಿತಗೊಳಿಸುವಲ್ಲಿ ವಿಶೇಷವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಮತ್ತು ಗ್ರಾಮೀಣ ಭಾಗ ಅಭಿವೃದ್ಧಿಯಾಗಲು CSR ಅನುದಾನದ ಅಡಿಯಲ್ಲಿ ಹೆಚ್ಚು ಹೆಚ್ಚು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ.. MSPL ಕಂಪನಿಯಿಂದ ಶುದ್ಧ ನೀರಿನ ಘಟಕ ಸ್ಥಾಪಿಸುವುದು,ಶಾಲಾ ಪೀಠೋಪಕರಣಗಳು ಹಾಗೂ ಸ್ಮಾರ್ಟ್ ಕ್ಲಾಸ್ ಗಳನ್ನು ಒದಗಿಸುವುದು, ಉಚಿತ ಹೊಲಿಗೆ ಯಂತ್ರ ತರಬೇತಿ, ಶೌಚಾಲಯ ವ್ಯವಸ್ಥೆ, ಜಾತ್ರೆಗಳಿಗೆ ಸಹಕಾರ, ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ,ಕೊಪ್ಪಳ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸಸಿ ನೆಡುವ ಕಾರ್ಯಕ್ರಮ,ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ, ಕೃತಕ ಕೈಕಾಲು ಜೋಡಣೆ ಸಲಕರಣೆ ಒದಗಿಸುವುದು ಸೇರಿದಂತೆ ಹತ್ತು ಹಲವು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ.
ಈಗಾಗಲೇ ಬಸ್ಸಾಪುರ್, ಹಾಲವರ್ತಿ ಹಾಗೂ ಕೊಪ್ಪಳ ರೈತರ ಜಮೀನುಗಳನ್ನು KIADB ಯು ಬಲ್ದೋಟ್ ಕಂಪನಿ ಗೆ ಹಸ್ತಾಂತರಸುತ್ತಾರೆ. ಸುಮಾರು 15 ವರ್ಷದಿಂದ ಜಮೀನು ಕಳೆದುಕೊಂಡ ರೈತರು ಕಂಪನಿ ಸ್ಥಾಪಿಸುವುದರಿಂದ ತಮಗೆ ಹಾಗೂ ತಮ್ಮ ಮಕ್ಕಳಿಗೆ ಉದ್ಯೋಗಾವಕಾಶಗಳು ಬರುವುದನ್ನೇ ಕಾಯುತ್ತಿದ್ದಾರೆ ಎಂದು ತಿಳಿಸಿರುವ ಅವರು,ಕಂಪನಿ ಬರುವುದು ಬೇಡ ಎಂದು ಕೆಲವು ಹಿತಾಸಕ್ತಿಗಳು ಕಂಪನಿ ಸ್ಥಾಪಿಸುವುದನ್ನು ತಡೆಗಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದರಿಂದ ಜಮೀನು ಕಳೆದುಕೊಂಡ ರೈತರು ಉದ್ಯೋಗಾವಕಾಶ ವಂಚಿತರಾಗುತ್ತಾರೆ ಹಾಗೂ ಯುವಕರಲ್ಲಿ ಗೂಳೇ ಹೋಗುವ ಸಮಸ್ಯೆ ಹೆಚ್ಚಾಗುತ್ತದೆ, ಆಶಾಭಾವನೆಯಲ್ಲಿದ್ದ ರೈತರಿಗೆ ನಿರಾಸೆ ಉಂಟಾಗುತ್ತಿದೆ. ಕೊಪ್ಪಳ ಹಾಗೂ ಸುತ್ತಮುತ್ತಲ ಜಿಲ್ಲೆಗಳ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಾರೆ ಇಂತಹ ಸಮಸ್ಯೆಗಳ ತಡೆಗಟ್ಟುವಲ್ಲಿ ಮತ್ತು ಜಿಲ್ಲೆಯ ಸಮಗ್ರ ಅಭಿವೃದ್ಧಿ ಹೊಂದುವಲ್ಲಿ ಕಾರ್ಖಾನೆಗಳು ಅನಿವಾರ್ಯವಾಗಿರುತ್ತವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಬಲ್ದೋಟ್ ಸಂಸ್ಥೆಯು ಇನ್ವೆಸ್ಟ್ ಕರ್ನಾಟಕ 2025 ರಲ್ಲಿ ಸುಮಾರು ರೂ 54,000 ಕೋಟಿ ಬಂಡವಾಳ ಹೂಡಿಕೆ ಯೋಜನೆಯನ್ನು ಪ್ರಕಟಿಸಿದ್ದು ಹಾಗೂ 15 ರಿಂದ 20 ಸಾವಿರ ಉದ್ಯೋಗಗಳು ಸೃಷ್ಟಿಸುವುದು, ಅದಲ್ಲದೆ ಪರಿಸರ ಮಾಲಿನ್ಯ ನಿಯಂತ್ರಣಕ್ಕಾಗಿ ಉನ್ನತ ತಂತ್ರಜ್ಞಾನ ಬಳಸುವುದಾಗಿ ಹೇಳಿಕೊಂಡಿದೆ.
ಬಲ್ದೋಟ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ ಕಂಪನಿ ಸ್ಥಾಪಿಸುವುದರಿಂದ ಕೊಪ್ಪಳದ ಜನ ಜೀವನಮಟ್ಟ ಸುಧಾರಿಸುವುದಲ್ಲದೆ ಒಳ್ಳೆಯ ಉದ್ಯೋಗ ಅವಕಾಶಗಳನ್ನು ಕೂಡ ಬದಗಿಸಿದಂತಾಗುತ್ತದೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹೊಂದುವ ಆಶಾಭಾವನೆ ವ್ಯಕ್ತವಾಗುತ್ತದೆ, ಎಂಎಸ್‌ಪಿಎಲ್ ಕಂಪನಿ ಸ್ಥಾಪನೆಗೆ ಮುಖ್ಯಮಂತ್ರಿಗಳು ಅನುವು ಮಾಡಿಕೊಡಬೇಕೆಂದು ದಲಿತ ಸಂಘಟನಾ ಸಮಿತಿ,ಭೀಮ ಘರ್ಜನೆ ಮನವಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು