ಇತ್ತೀಚಿನ ಸುದ್ದಿ
ಕೊಪ್ಪಳ: ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ತೆರಳುತ್ತಿದ್ದ ಭಕ್ತರಿದ್ದ ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ: 4 ಮಂದಿ ಸ್ಥಳದಲ್ಲೇ ಸಾವು
18/05/2024, 12:49

ಹನುಮಪ್ಪ ಯಲಬರ್ಗಾ ಕೊಪ್ಪಳ
info.reporterkarnataka@gmail.com
ಕೊಪ್ಪಳ ತಾಲೂಕಿನ ಹೊಸಳ್ಳಿ ಬಳಿ ನಡೆದ ಭೀಕರ ರಸ್ತೆ ದುರಂತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ.
ಕರಮುಡಿ ಗ್ರಾಮದ ಬಸವರಾಜ (22), ಮುತ್ತಪ್ಪ (22), ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ನಿವಾಸಿ ಕೊಂಡಪ್ಪ (60) ಮತ್ತು ದುರುಗಮ್ಮ ಹನುಮಪ್ಪ (65) ಮೃತಪಟ್ಟವರು.
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ಭಕ್ತರು ಪ್ರಯಾಣಿಸುತ್ತಿದ್ದ ಟ್ರಾಕ್ಟರಿಗೆ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಘೋರ ದುರಂತ ನಡೆದಿದೆ.
ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯವಾಗಿದ್ದಾರೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.