8:28 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಕೊರಗ ಯುವಜನರ ಉದ್ಯೋಗಕ್ಕೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ: ಸಮಸ್ಯೆಯನ್ನು ಆಲಿಸಿದ ಶಾಸಕ ಮಂಜುನಾಥ ಭಂಡಾರಿ

07/01/2026, 12:13

ಉಡುಪಿ(reporterkarnataka.com): ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ನಡೆಯುತ್ತಿರುವ ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಸ್ಥಳಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿಕೊಟ್ಟು ಸಮಸ್ಯೆಯನ್ನು ಆಲಿಸಿದರು. ಈ ವೇಳೆ ಕೊರಗ ಸಮುದಾಯದ ಯುವ ಜನರು ಸರಕಾರಿ ಉದ್ಯೋಗ ಪಡೆಯುವಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಶೀಘ್ರವೇ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.


ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ, ರಾಜ್ಯ ಆರ್ ಜಿ ಪಿ ಆರ್ ಎಸ್ ಸಂಘಟನೆಯ ಉಪಾಧ್ಯಕ್ಷೆ ರೋಶನಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯೆ ಡಾ. ಸುನಿತಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರಿಕಾ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು