ಇತ್ತೀಚಿನ ಸುದ್ದಿ
ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್: ಫೆ. 8 ಮತ್ತು 9ರಂದು ಕೊರ್ಡೆಲ್ ಖೇಳ್-ಮೇಳ್
03/02/2025, 22:41

ಮಂಗಳೂರು(reporterkarnataka.com): ನಗರದ ಕಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆ. 8 ಮತ್ತು 9ರಂದು ಕೊರ್ಡೆಲ್‌ಖೇಳ್-ಮೇಳ್ ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಧಾನ ಧರ್ಮಗುರು ವಂ| ಕ್ಲಿಫರ್ಡ್ ಫೆರ್ನಾಂಡಿಸ್ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿವಿಧ ರೀತಿಯ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಸ್ಟಾಲ್‌ಗಳು ಒಳಗೊಂಡಿವೆ ಎಂದರು.
ಫೆ. 8ರಂದು ಸಂಜೆ 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿ, ಕಿಶೋರ್ ಕೊಟ್ಟಾರಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕಾರ್ಯಕ್ರಮದ ಸಂಯೋಜಕ ರೋಯ್ ಕ್ಯಾಸ್ತೆಲಿನೋ, ಚರ್ಚ್‌ನ ಪಾಲನಾ ಸಮಿತಿ ಉಪಾಧ್ಯಕ್ಷೆ ರೂತ್ ಕ್ಯಾಸ್ತೆಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.