1:44 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕೊರ್ಗಿ: ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ ಪ್ರಕರಣ: ಓರ್ವ ಆರೋಪಿಯ ಬಂಧನ

12/08/2022, 00:47

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka.com): ಇಲ್ಲಿನ ಕೊರ್ಗಿ ಗ್ರಾಮದಲ್ಲಿ ಆ.5ರಂದು ರಾಡ್ ನಿಂದ ಹಲ್ಲೆ ನಡೆಸಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ, ಕೈಯಲ್ಲಿದ್ದ ಬಳೆ ಹಾಗೂ ಉಂಗುರ ಸಹಿತ 1.60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ತ್ರಾಸಿ ಹೊಸಾಡು ಗ್ರಾಮದ ಭರತ್ ನಗರದ ಪ್ರವೀಣ್(24) ಬಂಧಿತ ಆರೋಪಿ. ಈತ ಬೈಕ್ ನಲ್ಲಿ ಬಂದು ಮಹಿಳೆಗೆ ರಾಡ್ ನಿಂದ ಹಲ್ಲೆ ನಡೆಸಿ, ಕುತ್ತಿಗೆ ಹಾಗೂ ಕೈಯಲ್ಲಿದ್ದ ಚಿನ್ನಾಭರಣ ಸುಲಿಗೈದಿದ್ದನು. ಪ್ರಕರಣವನ್ನು ದಾಖಿಲಿಸಿಕೊಂಡು ತನಿಖೆಗೆ ಇಳಿದ ಕುಂದಾಪುರ ಗ್ರಾಮಾಂತರ ಪೊಲೀಸರು, ಆ.10ರಂದು ರಾತ್ರಿ ಗಂಗೊಳ್ಳಿ ತ್ರಾಸಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು