2:58 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೋರಿಯಾರು: 19ನೇ ವರ್ಷದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ

05/02/2024, 14:22

ಬಂಟ್ವಾಳ(reporter Karnataka.com):ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ಸಿದ್ಧಕಟ್ಟೆ ವಲಯ ಶ್ರೀ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವು ಕೋರಿಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಜರುಗಿತು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಶ್ರೀಯುತ ಮಾಧವ ಗೌಡ ಯೋಜನಾಧಿಕಾರಿಗಳು ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಧಾರ್ಮಿಕ ಉಪನ್ಯಾಸವನ್ನು ನೀಡಿದ ಶ್ರೀ ಮುನಿರಾಜ ರೆಂಜಾಳ ಅವರು “ಮಾನವ ಧರ್ಮವನ್ನು ಪಾಲಿಸಿ. ನಿನಗೆ ನೀನು ಏನನ್ನು ಮಾಡಬಾರದೆಂದು ಬಯಸಿದರೆ ನೀನು ಅದನ್ನು ಯಾರಿಗೂ ಮಾಡಬೇಡ” ಎಂಬ ನುಡಿಮಾತನ್ನು ಹೇಳಿದರು.


ಪೂಜ್ಯರ ಸಂದೇಶವನ್ನು ಮೇಲ್ವಿಚಾರಕರಾದ ಶಿವರಂಜನ್ ಕೆ. ಅವರು ಪ್ರಸ್ತಾಪಿಸಿದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋಪಾಲ್ ಗೌಡ ಕೊರಿಯಾರು, ಸುರೇಶ ಅಂಚನ್, ಸದಾನಂದ ಶೀತಲ್, ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು, ಭಕ್ತಾದಿಗಳು,ಸೇವಾ ಪ್ರತಿನಿಧಿಗಳು ಹಾಗೂ ವಿಎಲ್ಇ ಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಧಾಕರ್ ಶೆಟ್ಟಿ ನಿರ್ವಹಿಸಿದರು.ಸುರೇಶ್ ಅಂಚನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು