9:34 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕೋಟ: ಕೊರಗ ಸಮುದಾಯದ ಮೆಹಂದಿ ಪಾರ್ಟಿಯಲ್ಲಿ ಪೊಲೀಸ್ ದೌರ್ಜನ್ಯ; ಮದು ಮಗ ಸೇರಿ ಮಹಿಳೆಯರ ಮೇಲೆ ಲಾಠಿ ಪ್ರಹಾರ ಆರೋಪ

28/12/2021, 18:15

ಕೋಟ(reporterkarnataka.com): ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದು ಮಗ, ಹೆಣ್ಣು ಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. 

ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಹಲ್ಲೆ ನಡೆಸಿರುವ ಘಟನೆಗೆ ಸ್ಥಳೀಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಲು ಯಾವುದೇ ಕಾರಣವೂ ಇರಲಿಲ್ಲ ಎಂದು ದೂರಿದ್ದಾರೆ.

ಪೊಲೀಸರ ದಾಳಿಗೆ ಕಾರಣವೇನು.?

ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ಕೋಟತಟ್ಟು ಗ್ರಾಮದ ಬಾರಿಕೆರೆ ನಿವಾಸಿ ರಾಜೇಶ್ ಅವರ ಮದುವೆ ಕಾರ್ಯಕ್ರಮವು ಡಿ. 29 ರಂದು ಕುಮಟಾದಲ್ಲಿ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಡಿ. 27 ರಂದು ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. 9.40 ರ ಸುಮಾರಿಗೆ ಹೆದ್ದಾರಿ ಗಸ್ತು ಪೊಲೀಸರು ಮನೆಗೆ ಬಂದಿದ್ದು, ಡಿಜೆ ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಈ ವೇಳೆ ನೈಟ್ ಕರ್ಫ್ಯೂ ನಾಳೆ ರಾತ್ರಿಯಿಂದ ಜಾರಿ ಆಗುತ್ತದೆ. ನಮ್ಮ ಡಿಜೆಯಿಂದ ಯಾರಿಗೂ ತೊಂದರೆ ಆಗುತ್ತಿಲ್ಲ. ಮನೆಯವರೇ ಹೆಚ್ಚಿನ ಮಂದಿ ಇದ್ದು, ಸ್ವಲ್ಪ ಹೊತ್ತು ಕುಣಿದು ಆ ಬಳಿಕ ಬಂದ್ ಮಾಡುವುದಾಗಿ ತಿಳಿಸಿದ್ದರು. ಆ ಬಳಿಕ ಪೊಲೀಸರು ಅಲ್ಲಿಂದ ಹಿಂದೆ ಹೋಗಿದ್ದರು. ಇದಾದ ಕೆಲ ಹೊತ್ತಿನ ಬಳಿಕ ಸ್ಥಳಕ್ಕೆ ಕೋಟ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಯಾವ ಕಾರಣವೂ ಕೇಳದೇ ಡಿಕೆ, ಲೈಟ್ ಆಫ್‌ ಮಾಡಿ ಮೆಹಂದಿ ಮನೆಯಲ್ಲಿದ್ದ ಹೆಣ್ಣು ಮಕ್ಕಳು, ಮಹಿಳೆಯರು, ಮಧುಮಗನಿಗೆ, ಹಿರಿಯರು ಯಾರನ್ನು ನೋಡದೇ ಏಕಾಏಕಿಯಾಗಿ ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ, ಅವಾಚ್ಯ ಶಬ್ಧಗಳಿಂದ ಬೈದು ನಿಂದಿಸಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು