6:22 PM Monday2 - November 2026
ಬ್ರೇಕಿಂಗ್ ನ್ಯೂಸ್
ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |… ಬಿಜೆಪಿ ಮರುಸೇರ್ಪಡೆಗೆ ಯತ್ನಾಳ್‌ ಕಠಿಣ ಷರತ್ತು: ವಿಜಯೇಂದ್ರ ಹೇಳಿಕೆಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ… ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಎಸ್‌ಐಟಿ ನೂತನ ಮುಖ್ಯಸ್ಥರಾಗಿ ಚೇತನ್… ಭೂತಾನ್‌ನಲ್ಲಿ ಹಿಮನದಿ ಸರೋವರ ಸ್ಫೋಟ: ಅಸ್ಸಾಂ, ಬಂಗಾಳದಲ್ಲಿ ಪ್ರವಾಹದ ಎಚ್ಚರಿಕೆ ರಾಜ್ಯಾದ್ಯಂತ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಾಳಿ: 24 ಘಟಕಗಳಿಗೆ ನೋಟಿಸ್; ಮುಳಬಾಗಿಲಿನಲ್ಲಿ… ಅತ್ಯಾಚಾರ ಎಸಗಿದ ಯುವಕರನ್ನು ಅಪಹರಿಸಿ ಹಣದ ಬೇಡಿಕೆಯಿಟ್ಟ ಸಂತ್ರಸ್ತೆ: 10 ಮಂದಿ ಆರೋಪಿಗಳ… ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ 4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ…

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

21/01/2025, 22:38

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರುಗನ್, ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಮಾಹಿತಿ ಲಭ್ಯವಾಗಿಲ್ಲ.
ಮುಂಬೈಯ ಧಾರಾವಿಯಲ್ಲಿ 10 ಮಂದಿಯ ಖತರ್ನಾಕ್ ಗ್ಯಾಂಗ್ ಬ್ಯಾಂಕ್ ದರೋಡೆಗೆ ಪ್ಲಾನ್ ಹಾಕಿತ್ತು. ಈ ಗ್ಯಾಂಗ್ ನಿಂದ ಇಬ್ಬರನ್ನು ಹೊರಗಿಡಲಾಗಿತ್ತು. ಈ ಹೊರಗಿಟ್ಟ ಇಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮುಂಬೈ ಪೊಲೀಸರು ಅವರ ಮನೆಯ ಮೇಲೆ ನಿಗಾ ಇಟ್ಟಿದ್ದರು. ಈ ನಡುವೆ ದರೋಡೆಕೋರರಲ್ಲಿ ಒಬ್ಬನಾದ ಮುರುಗನ್ ಮಂಗಳೂರಿನ ಕೋಟೆಕಾರಿಗೆ ಬಂದು ಕೋಟೆಕಾರು ಸಹಕಾರಿ ಸಂಘದಿಂದ ನಗ ಮತ್ತು ನಗದು ದೋಚುವ ಪ್ಲಾನ್ ಹಾಕಿದ್ದ. ಈ ಪ್ಲಾನ್ ನಂತೆ ದರೋಡೆ ನಡೆದಿದೆ. ಈ ಬಗ್ಗೆ ಮಂಗಳೂರು ಪೊಲೀಸರಿಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರು ನೀಡಿದ ಸುಳಿವಿನ ಆಧಾರದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದರೋಡೆಕೋರರು ಸಹಕಾರಿ ಸಂಘ ಲೂಟಿ ಮಾಡಿದ ಬಳಿಕ ಕೇರಳ ಮಾರ್ಗವಾಗಿ ಫಿಯೆಟ್ ಕಾರಿನಲ್ಲಿ ಹಣ ಮತ್ತು ಚಿನ್ನದ ಗೋಣಿಯನ್ನು ಒಯ್ದಿದ್ದರು. ಫಿಯೆಟ್ ಕಾರಿನಲ್ಲೇ ಸುಮಾರು 700 ಕಿಮೀ. ಪ್ರಯಾಣ ನಡೆಸಿದ್ಸರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು