2:06 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕೋಟೇಶ್ವರ: ಖಾಸಗಿ ಬಸ್ ಡಿಕ್ಕಿ; ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು

05/12/2022, 20:52

ಕುಂದಾಪುರ:reporterkarnaka.com: ಖಾಸಗಿ ಎಕ್ಸ್ ಪ್ರೆಸ್ ಬಸ್ ವೊಂದು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ‌ಯೊಬ್ಬರು‌ ಮೃತಪಟ್ಟ ಘಟನೆ ಕೊಟೇಶ್ವರ ಗ್ರಾಮದ ಅಂಕದಕಟ್ಟೆಯ ಸರ್ಜನ್‌‌ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಗೋವಿಂದ ನಾಯ್ಕ್ ಎಂದು ಗುರುತಿಸಲಾಗಿದೆ. ಇವರು‌ ನಿನ್ನೆ ಸಂಜೆ ಅಂಕದಕಟ್ಟೆಯ ಸರ್ಜನ್‌‌ ಆಸ್ಪತ್ರೆಯ ಬಳಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದರು. ಈ ವೇಳೆ ಆರೋಪಿ ಕಿರಣ್‌ ಕುಮಾರ್‌ ಎಂಬಾತನು ಬಸ್ ಅತೀವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಗೋವಿಂದ ನಾಯ್ಕ್ ಗೆ ಡಿಕ್ಕಿ‌ ಹೊಡೆದಿದ್ದಾನೆ.

ಇದರಿಂದ ಗೋವಿಂದ ನಾಯ್ಕ್ ತಲೆಗೆ‌ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಅಂಕದಕಟ್ಟೆ ಸರ್ಜನ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಗೋವಿಂದ ನಾಯ್ಕ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು