3:30 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

9823.21 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

23/12/2024, 23:01

ಬೆಂಗಳೂರು(reporterkarnataka.com): <ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 64ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 9823.31 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5605 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ಹೇಳಿದರು.


ಇಂದಿನ ಸಭೆಯಲ್ಲಿ ಮೂರು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಒಟ್ಟು 9 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಮೆ.ಡಿ.ಎನ್ ಸಲ್ಯೂಷನ್ಸ್ ಇಂಡಿಯಾ ಪ್ರೈ.ಲಿ ಸಂಸ್ಥೆಯ 998 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 467 ಉದ್ಯೋಗ , ಮೆ. ಸೈಲೆಕ್ಟ್ರಿಕ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಷರಿಂಗ್ ಪ್ರೈ.ಲಿ ಸಂಸ್ಥೆ ಯ 3425.60 ಕೋಟಿ ರೂ. ಹೂಡಿಕೆಯಿಂದ 460 ಉದ್ಯೋಗ ಹಾಗೂ ಮೆ: ಸನ್ಸೆರಾ ಇಂಜಿನಿಯರಿಂಗ್ ಲಿಮಿಟೆಡ್ ಸಂಸ್ಥೆಯ 2150 ಕೋಟಿ ರೂ. ಹೂಡಿಕೆಯಿಂದ 3500 ಉದ್ಯೋಗ ಸೃಷ್ಠಿಯಾಗುತ್ತಿರುವುದಾಗಿ ಅವರು ನುಡಿದರು.
ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು