ಇತ್ತೀಚಿನ ಸುದ್ದಿ
ಕೋಟಿ ವೃಕ್ಷ ಆಂದೋಲ: ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ
23/06/2023, 22:18
ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರಕಾರದ ಅರಣ್ಯ ಇಲಾಖೆಯ ಕೋಟಿ ವೃಕ್ಷ ಆಂದೋಲನ ಅಂಗವಾಗಿ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್ ಆವರಣದಲ್ಲಿ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಗಿಡವನ್ನು ನೆಡುವ ಮೂಲಕ ಕೋಟಿ ವೃಕ್ಷ ಆಂದೋಲನಕ್ಕೆ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಪಂ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಮುಲ್ಲಾಯಿ ಮುಹಿಲನ್, ಎಂ.ಪಿ. ಭಾ.ಅ.ಸೇ. ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ, ಭಾ.ಅ.ಸೇ. ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ಭಾ.ಅ.ಸೇ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಾಂತ್ರಿಕ ಸಹಾಯಕ ಪಿ. ಶ್ರೀಧರ್, ಮಂಗಳೂರು ವಲಯದ ವಲಯ ಅರಣ್ಯ ಅಧಿಕಾರಿರವರಾದ ಪ್ರಶಾಂತ್ ಕುಮಾರ್ ಮತ್ತು ಬಂಟ್ವಾಳ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯ ಅಧಿಕಾರಿ ರವಿ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜ ಮತ್ತಿತರರು ಉಪಸ್ಥಿತರಿದ್ದರು.