7:31 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೋಟಿ ವೃಕ್ಷ ಆಂದೋಲ: ಸ್ಪೀಕರ್ ಖಾದರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ

23/06/2023, 22:18

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರಕಾರದ ಅರಣ್ಯ ಇಲಾಖೆಯ ಕೋಟಿ ವೃಕ್ಷ ಆಂದೋಲನ ಅಂಗವಾಗಿ ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್‌ ಆವರಣದಲ್ಲಿ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌ ಮತ್ತು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಗಿಡವನ್ನು ನೆಡುವ ಮೂಲಕ ಕೋಟಿ ವೃಕ್ಷ ಆಂದೋಲನಕ್ಕೆ ಚಾಲನೆ ನೀಡಿದರು.



ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಜಿಪಂ ಪ್ರಭಾರ ಕಾರ್ಯನಿರ್ವಾಹಣಾಧಿಕಾರಿ ಮುಲ್ಲಾಯಿ ಮುಹಿಲನ್, ಎಂ.ಪಿ. ಭಾ.ಅ.ಸೇ. ಮಂಗಳೂರು ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್ ವೈ.ಕೆ, ಭಾ.ಅ.ಸೇ. ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ಭಾ.ಅ.ಸೇ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಾಂತ್ರಿಕ ಸಹಾಯಕ ಪಿ. ಶ್ರೀಧರ್, ಮಂಗಳೂರು ವಲಯದ ವಲಯ ಅರಣ್ಯ ಅಧಿಕಾರಿರವರಾದ ಪ್ರಶಾಂತ್ ಕುಮಾರ್ ಮತ್ತು ಬಂಟ್ವಾಳ ಸಾಮಾಜಿಕ ಅರಣ್ಯ ವಲಯದ ವಲಯ ಅರಣ್ಯ ಅಧಿಕಾರಿ ರವಿ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು