3:50 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ

28/04/2025, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ಅವರು ಮಾತನಾಡುತ್ತಾ, “ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು,” ಎಂದರು. ಜೊತೆಗೆ, ಹೊಸದಾಗಿ ಜಾರಿಗೆ ಬಂದಿರುವ ಬಿಎನ್ಎಸ್ (ಭದ್ರತಾ ಕ್ರಮ) ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಬಣಕಲ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸುತ್ತಮುತ್ತಲ ಶಾಲಾ ಕಟ್ಟಡಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿಗೆ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ಎಚ್ಚರಿಕೆ ನೀಡುತ್ತಾ, “ಸಮಾಜಿಕ ಏಕತೆಯನ್ನು ಹಾಳುಮಾಡುವ ಸಂದೇಶಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಮಕ್ಕಳ ರಕ್ಷಣೆ ಸಂಬಂಧಿತ ಪೋಕ್ಸೋ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
“ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಟ್ಟುಕೊಳ್ಳಬೇಕು” ಎಂದು ತೋಟದ ಮಾಲೀಕರಿಗೆ ಸಲಹೆ ನೀಡಿದರು.
“ಚಿಕ್ಕಮಗಳೂರು-ಮೂಡಿಗೆರೆ ಭಾಗ ಪ್ರವಾಸಿಗರ ನಾಡಾಗಿದ್ದು, ಹೆಚ್ಚಿನ ಪ್ರವಾಸಿಗರು ಕೊಟ್ಟಿಗೆಹಾರಕ್ಕೆ ಬಂದು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ಗಳನ್ನು ತಿನ್ನುತ್ತಾರೆ, ಹೀಗಾಗಿ ಆಹಾರದ ಗುಣಮಟ್ಟ ಕಾಪಾಡಿ, ಅಂಗಡಿ–ಹೋಟೆಲ್‌ಗಳ ಮುಂದೆ ಸ್ವಚ್ಛತೆ ಕಾಪಾಡಿ, ಕಸ ಹಾಕದಂತೆ ಜಾಗರೂಕರಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಶೀಲಾ, ಸದಸ್ಯರುಗಳಾದ ಸತೀಶ್ ಗೌಡ, ಸ್ಮಿತಾ, ವರ್ತಕರ ಸಂಘದ ಅಧ್ಯಕ್ಷ ಟಿ.ಎಮ್. ಗಜೇಂದ್ರ ಗೌಡ, ಸಮಾಜ ಸೇವಕ ಸಂಜಯ್ ಗೌಡ, ಆಟೋ ಸಂಘದ ಅಧ್ಯಕ್ಷ ರಮೇಶ್, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರು ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು