9:09 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಕೋಟತಟ್ಟು: ಮೀನುಗಾರ ಯುವಕ ನೇಣಿಗೆ ಶರಣು; ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೃತ್ಯ

30/10/2022, 11:46

ಬ್ರಹ್ಮಾವರ(reporterkarnataka.com):ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದ ಪಡುಕೆರೆಯ ಸಂತೋಷ ಕುಂದರ್(38) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಯಿಯೊಂದಿಗೆ ವಾಸವಾಗಿದ್ದ ಇವರು, ಮೀನುಗಾರಿಕೆ ಕೆಲಸಕ್ಕೆ ಹೋಗುತ್ತಿದ್ದರು. ದೀಪಾವಳಿ ಹಬ್ಬದ ರಜೆಗೆ ಬಂದವರು, ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು. ಕೆಲವು ದಿನಗಳಿಂದ ತಾಯಿಯು ತನ್ನ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಒಬ್ಬನೇ ಇದ್ದ ಸಂತೋಷ್ ಜೀವನದಲ್ಲಿ ಜಿಗುಪ್ಸೆಗೊಂಡು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪಕ್ಕದ ಮನೆಯವರು ತಿಂಡಿ ತಿನ್ನಲು ಕರೆಯಲು ಬಂದಾಗ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು