3:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಬಳಿ ಕಾಡುಕೋಣ ದಾಳಿ: ಇಬ್ಬರಿಗೆ ತೀವ್ರ ಗಾಯ; ಆಸ್ಪತ್ರೆಗೆ ದಾಖಲು

14/03/2024, 07:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಕೊಟ್ಟಿಗೆಹಾರದ ಬಾಳೂರು ಸಮೀಪದ ಹೊರಟ್ಟಿ ಹಾಗೂ ಜಾವಳಿಯ ಸಂಪ್ಲಿ ಬಳಿ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬಾಳೂರು ಹೊರಟ್ಟಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿವಿದಿದ್ದು ಕಾಲಿನ ಬಲಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅವರನ್ನು ಮೂಡಿಗೆರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಉಪ ವಲಯ ಅರಣ್ಯಾಧಿಕಾರಿ ಚರಣ್, ಮೋಸಿನ್, ಗ್ರಾಮಸ್ಥ ರಘುಪತಿ ಭೇಟಿ ನೀಡಿ ದಾಳಿಯಾದ ಸ್ಥಳ ಪರಿಶೀಲನೆ ಮಾಡಿ ಪರಿಹಾರದ ಭರವಸೆ ನೀಡಿದ್ದಾರೆ. ಜಾವಳಿಯ ಸಮೀಪದ ಸಂಪ್ಲಿ ಬಳಿ ಕಾಡುಕೋಣ ದಾಳಿಯಿಂದ ನಡೆಸಿ ಟಿಂಬರ್ ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ. ಜಾವಳಿ ಬಳಿ ಗ್ರಾಮ ಪಂಚಾಯಿತಿ ಸದಸ್ಯ ಪ್ರತೀಶ್ ಅವರ ಮೇಲೆ ಕಾಡುಕೋಣ ದಾಳಿ ನಡೆಸಿ ಬಲಭಾಗದ ಪಕ್ಕೆ ಮುರಿದಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪವಲಯ ಅರಣ್ಯ ಅಧಿಕಾರಿ ಚಂದನ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು