11:41 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್  ಚೆಕ್‍ಪೋಸ್ಟ್ ಗೆ ಚಿಂತನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

14/05/2022, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದರು.

ಕೊಟ್ಟಿಗೆಹಾರದ ಚೆಕ್‍ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಕೃಷಿ ಉತ್ಪನ್ನಗಳ ತನಿಖಾ ಠಾಣೆಯೂ ಎಲ್ಲವೂ ಒಂದೇಡೆ ಕಾರ್ಯ ನಿರ್ವಹಿಸುವಂತೆ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಕೊಟ್ಟಿಗೆಹಾರದಲ್ಲಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ವರ್ತಕರ ಸಹಕಾರದಿಂದ ಸಿಸಿ ಕ್ಯಾಮರಾ ಅಳವಡಿಸಲು ಉದ್ದೇಶಿಸಲಾಗಿದೆ. ಸ್ಥಳೀಯ ವರ್ತಕರ ಪಾಲುದಾರಿಕೆ ಇದ್ದರೆ ಸಿಸಿ ಕ್ಯಾಮರಾದ ಬಗ್ಗೆ ಮುತುವರ್ಜಿ ವಹಿಸಲು ಸಾಧ್ಯವಾಗುತ್ತದೆ ಎಂದರು.

ಚಾರ್ಮಾಡಿ ಘಾಟ್‍ನಲ್ಲಿ ಈಗಾಗಲೇ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದು ಇದನ್ನು ಮತ್ತಷ್ಟು ಹೆಚ್ಚಿಸುವಂತೆ ವೃತ್ತ ನಿರೀಕ್ಷಕ ಸೋಮಶೇಖರ್ ಅವರಿಗೆ ಸೂಚಿಸಿದರು. ದರೋಡೆ ನಡೆದ ಕೇವಲ 10 ಗಂಟೆಯೊಳಗೆ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರಭು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಹರ್ಷಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಪ್ರಕಾಶ್, ನೌಕರರ ಸಂಘದ ಪ್ರತಿನಿಧಿ ಪದ್ಮರಾಜ್, ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್‍ಐ ಸತೀಶ್, ಅರಣ್ಯ ರಕ್ಷಕ ವಿಜಯಕುಮಾರ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ, ದೇವೆಂದ್ರ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು