11:58 PM Saturday21 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಕೆ.ತಲಗೂರಿನಲ್ಲಿ 23.20 ಎಕರೆ ಸರಕಾರಿ ಜಾಗ ಒತ್ತುವರಿ ತೆರವು: ಅರಣ್ಯ ಇಲಾಖೆ ಕಾರ್ಯಾಚರಣೆ

14/08/2024, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ್ಲಿ ತೋಟದ ಮಾಲೀಕರೊಬ್ಬರು ಒತ್ತುವರಿ ಮಾಡಿದ್ದು ಅದರಲ್ಲಿ ಕಾಫಿ ಬೆಳೆ,ಅಡಿಕೆ, ತೆಂಗು ಬೆಳೆಯಲಾಗಿತ್ತು. ಅದರಲ್ಲಿ ಸದ್ಯಕ್ಕೆ ಕಾಫಿ, ಅಡಿಕೆ ಬೆಳೆಯನ್ನು ಖುಲ್ಲಾಗೊಳಿಸಿ ಸುಮಾರು ಶೇ 65ರಷ್ಟು ಸರ್ಕಾರಿ ಜಾಗವನ್ನು ಆದೇಶದಂತೆ ತೆರವು ಗೊಳಿಸಲಾಯಿತು. ಶೇ 35 ಭಾಗದಷ್ಟು ಜಾಗವನ್ನು ಖುಲ್ಲಾಗೊಳಿಸಲು ಬಾಕಿ ಇದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಿಗ್ಗೆ 5.30 ಗಂಟೆಯಿಂದ ಸಂಜೆ 3.30 ವರೆಗೆ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಮಕ್ಷಮದಲ್ಲಿ ಶಾಂತಿಯುತವಾಗಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶ ಪಡಿಸಲಾಯಿತು. ಮಾಲೀಕರಿಗೆ ನಾಲ್ಕು ವರ್ಷದ ಹಿಂದೆಯೇ ಈ ಬಗ್ಗೆ ನೊಟೀಸ್ ನೀಡಲಾಗಿತ್ತು. ಅದರಂತೆಯೇ ಜಾಗದಲ್ಲಿನ ಬೆಳೆ ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್, ಎಎಸೈ ಟಿ.ಕೆ. ಶಶಿ ಹಾಗೂ 25 ಮಂದಿ ಡಿ.ಆರ್.ಪೊಲೀಸರ ತಂಡ ಹಾಗೂ ಆಲ್ದೂರು ವಲಯ ಅರಣ್ಯ ಅಧಿಕಾರಿಗಳಾದ ಹರೀಶ್ ಕುಮಾರ್, ಚರಣ್ ಕುಮಾರ್, ಶಿವಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ನವೀನ್, ಗೌತಮ್, ಸಂದೀಪ್, ಚೇತನ್, ವಿಜಯ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮೊಹಸೀನ್, ಕಿಶೋರ್, ನಾಗರಾಜ್, ಉಮೇಶ್, ಸುರೇಶ್, ಅರಣ್ಯ ವೀಕ್ಷಕ ಗಿರೀಶ್, ಸುಧೀರ್
ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು