11:17 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಕಾಫಿತೋಟದಲ್ಲಿ ಮರಗಸಿ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

24/02/2023, 21:00

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಕಾಫಿತೋಟದಲ್ಲಿ ಮರಗಸಿ ಮಾಡುವಾಗಿ ಆಯಾ ತಪ್ಪಿ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ವಾಟೇಖಾನ್ ಎಂಬಲ್ಲಿ ಘಟನೆ ನಡೆದಿದೆ.
ಬಾಳೂರು ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ವಕೀಲರಾದ ಶ್ರೀನಾಥ್ ಅವರ ಕಾಫಿ ತೋಟದಲ್ಲಿ ಮರಗಸಿ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ.
ಮೃತರನ್ನು ತಮಿಳುನಾಡು ಮೂಲದ ಕಾರ್ಮಿಕ ಮುತ್ತು ಮಣಿ (28 ) ಎಂದು ಗುರುತಿಸಲಾಗಿದೆ. ಸುಮಾರು 25 ಅಡಿ ಎತ್ತರದ ಮರದಿಂದ ಆಯಾತಪ್ಪಿ ಬಿದ್ದಿದ್ದು, ಕುತ್ತಿಗೆ ಭಾಗಕ್ಕೆ ತೀವ್ರ ಪೆಟ್ಟಾಗಿದೆ.

ಗಾಯಳುವನ್ನು ತೋಟದ ಮಾಲೀಕರು ತಕ್ಷಣ ಬಣಕಲ್ ಆರೀಫ್ ಅವರ ಅಂಬುಲೆನ್ಸ್ ಮೂಲಕ ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಗೆ ಸಾಗಿಸಿದ್ದಾರೆ. ತೀವ್ರವಾಗಿ ಪೆಟ್ಟುತಾಗಿದ ಪರಿಣಾಮ ಕಾರ್ಮಿಕ ಆಸ್ಪತ್ರೆಗೆ ತಲುಪಿದ ಕೆಲ ಕ್ಷಣಗಳಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮುತ್ತುಮಣಿ ಸಾವಿಗೆ ತೋಟದ ಮಾಲೀಕರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತ ಶರೀರವನ್ನು ಸಂಬಂಧಿಕರೊಂದಿಗೆ ತಮಿಳುನಾಡಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ. ತೋಟದ ಮಾಲೀಕರು ತಮ್ಮ ತೋಟಕ್ಕೆ ಕಾರ್ಮಿಕ ವಿಮೆ ಮಾಡಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ವಿಮಾ ಪರಿಹಾರ ದೊರಕಿಸಿಕೊಡುವ ಭರವಸೆ ವ್ಯಕ್ತಪಡಿಸಿದ್ದಾರೆ.
ಕಾಫಿತೋಟದಲ್ಲಿ ಅವಘಡಗಳು ಸಂಭವಿಸಿ ಕಾರ್ಮಿಕರು ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ತಮಿಳುನಾಡು ಮತ್ತು ಅಸ್ಸಾಂ ಮೂಲದ ಕೆಲವು ಮೇಸ್ತ್ರಿಗಳು ಪರಿಣತಿಯಿಲ್ಲದ ಕಾರ್ಮಿಕರನ್ನು ಮರಹತ್ತಿಸುವ ದುಸ್ಸಾಹಸಕ್ಕೆ ಮುಂದಾಗುತ್ತಿದ್ದಾರೆ.

ತೋಟದ ಮಾಲೀಕರು ಇಂತಹ ಅಪಾಯಕಾರಿ ಕೆಲಸಗಳನ್ನು ಮಾಡಿಸುವಾಗ ಕಾರ್ಮಿಕ ವಿಮೆ ಮಾಡಿಸುವುದು ಅತ್ಯಗತ್ಯವಾಗಿದೆ. ಇಲ್ಲವಾದರೆ ಇಂತಹ ಅವಘಡಗಳು ಸಂಭವಿಸಿದಾಗ ಕಾರ್ಮಿಕ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ಮತ್ತು ತೋಟದ ಮಾಲೀಕರು ಪಶ್ಚಾತ್ತಾಪ ಪಡುವ ಸನ್ನಿವೇಶ ಎದುರಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು