5:37 AM Thursday16 - January 2025
ಬ್ರೇಕಿಂಗ್ ನ್ಯೂಸ್
ಗರೋಡಿ ಜಾತ್ರೆಗೂ ಊರವರಿಗೆ ನೀರಿಲ್ಲ!: 5 ದಿನಗಳಿಂದ ನೋ ವಾಟರ್!!; ಮೇಯರ್ ಅವರೇ… ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು

30/09/2023, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.


ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣ ಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ. ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ ಉದುರುತ್ತಿದೆ.ಇನ್ನು ಅತಿಯಾದ ಮಳೆಯ ಹಿನ್ನಲೆಯಲ್ಲಿ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದ ಸಕಾಲ ಮಳೆಗಳು ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ. .ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ.ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ.ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು