3:37 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ; ಟ್ರಾಫಿಕ್ ಜಾಮ್; ನಿದ್ದೆಗೆಟ್ಟ ಪೊಲೀಸರು

17/09/2023, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೈವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕ ಅತಿಯಾದ ವೇಗದಲ್ಲಿ ಇದ್ದ ಕಾರಣ ಲಾರಿ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಸಂಭವಿಸಿತ್ತು.


ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ. ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು