5:21 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಕೋಟ್ಯಂತರ ರೂ. ವಂಚನೆ ಪ್ರಕರಣ: ಪ್ರಮುಖ ಆರೋಪಿ ಕದಂ ಬಂಧನ; ಮುಂಬೈ, ಮಂಗಳೂರು ಪೊಲೀಸರ ಜಂಟೀ ಕಾರ್ಯಾಚರಣೆ

01/06/2023, 11:34

ಮಂಗಳೂರು(reporterkarnataka.com): ಸುಮಾರು 1.15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಆರೋಪಿ ಕದಂ ಎಂಬತನನ್ನು ಮುಂಬೈನಲ್ಲಿ ಬಂಧಿಸಲಾಗಿದೆ.
ಆರೋಪಿ ಬಂಧನಕ್ಕಾಗಿ ಮಂಗಳೂರಿನಿಂದ ಮುಂಬೈಗೆ ತೆರಳಿದ್ದ ಸಿಸಿಬಿ ಪೊಲೀಸರ ತಂಡ ಮುಂಬೈ ಕ್ರೈಂ ಬ್ರಾಂಚ್ ಪೋಲಿಸರ ಸಹಾಯದಿಂದ ಕದಂನನ್ನು ವಶಕ್ಕೆ ತೆಗೆದುಕೊಂಡಿದೆ.
ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ‘ರೋಹನ್ ಕಾರ್ಪೊರೇಷನ್ ‘ನ ಆಡಳಿತ ನಿರ್ದೇಶಕ ರೋಹನ್ ಮತ್ತು ಹರ್ಷ ಫೈನಾನ್ಸ್ ಮಾಲಕ ಹರೀಶ್ ಎಂಬವರಿಗೆ 1.15 ಕೋಟಿ ರೂ.ಗಳನ್ನು ವಂಚಿಸಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಆರೋಪಿಗಳಾದ ಕದಂ ಮತ್ತು ಕಳತ್ತೂರು ವಿಶ್ವನಾಥ ಶೆಟ್ಟಿ ಇವರಿಬ್ಬರೂ ಸಂಚು ರೂಪಿಸಿ 300 ಕೋಟಿ ರೂ.ಸಾಲ ತೆಗೆಸಿ ಕೊಡುವ ಭರವಸೆ ನೀಡಿ ಈ ವಂಚನೆ ನಡೆಸಿದ್ದರು ಎಂದು ಪೊಲೀಸರು ದಾಖಲೆಸಿಕೊಂಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು