12:54 AM Friday17 - April 2026
ಬ್ರೇಕಿಂಗ್ ನ್ಯೂಸ್
Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

05/01/2025, 10:11

ಗಣೇಶನ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಉತ್ತಮ ಅಂಕಗಳ ಜೊತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರಳಾದೇವಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಉದ್ಯೋಗ ಮೇಳ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದರು.
ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಯಶವಂತ್ ರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ನಮ್ಮ ವಾಣಿಜ್ಯೋದ್ಯಮ ಮಂಡಳಿಯು ಇಂತಹ ಚಟುವಟಿಕೆಗಳಿಗೆ ಸದಾ ಸಹಕರಿಸುತ್ತದೆ ಎಂದರು.
ಉದ್ಯೋಗ ಮೇಳದ ಬಗೆಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್, ಈ ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಉದ್ಯೋಗ ಭರವಸೆ ಕೋಶದ ಸಂಚಾಲಕ ಕಲ್ಯಾಣ ಬಸವ, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಪ್ರಾಣೇಶ್, ಎಎಸ್‌ಒ ಚಂದ್ರಮ್ಮ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದ್ ಚೌದ್ರಿ, ಡಾ.ಹೊನ್ನೂರಾಲಿ, ಡಾ.ಸೋಮನಾಥ, ಡಾ.ದಸ್ತಗೀರಸಾಬ್ ದಿನ್ನಿ, ಡಾ.ಚನ್ನ ಬಸವಯ್ಯ, ಡಾ.ಶ್ರೀನಿವಾಸ ರೆಡ್ಡಿ, ಪಂಪನಗೌಡ, ಡಾ.ಪಂಚಾಕ್ಷರಿ, ಡಾ.ಗುರುಬಸಪ್ಪ, ಡಾ.ದುರ್ಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು