12:07 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು