6:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ರಮಾನಾಥ ರೈ: ಮಹತ್ವದ ಚರ್ಚೆ

02/06/2021, 21:13

ಮಂಗಳೂರು(reporterkarnataka news): ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ ರೈ ಅವರು ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕರಾವಳಿಯಲ್ಲಿ ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಜನಪರ ಕೆಲಸಗಳ ಬಗ್ಗೆ ಚರ್ಚಿಸಿದರು.

ಕೊರೊನಾ ನಿಯಂತ್ರಣ ಮತ್ತು ಲಾಕ್ ಡೌನ್ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಕೈಗೊಂಡಿರುವ ಪರಿಹಾರ ಹಾಗೂ ಹೆಲ್ಪ್ ಲೈನ್ ನೆರವು ಕಾರ್ಯಕ್ರಮಗಳ ಬಗ್ಗೆ ರೈ ಅವರು ಕೆಪಿಸಿಸಿ ಅಧ್ಯಕ್ಷರಿಗೆ ವಿವರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಬ್ಲಾಕುಗಳ ಸಮಿತಿಗಳು, ವಿವಿಧ ಮಂಚೂಣಿ ಸಂಘಟನೆಗಳು ಮತ್ತು ಜಿಲ್ಲಾ ಸಮಿತಿಯ ವತಿಯಿಂದ ನಡೆಯುತ್ತಿರುವ ವೈದ್ಯಕೀಯ ನೆರವು, ಆಂಬ್ಯುಲೆನ್ಸ್ ಸೇವೆ, ಆಕ್ಸಿಜನ್ ಒದಗಿಸುವುದು, ಆಹಾರ ಕಿಟ್ ವಿತರಣೆ, ಪ್ರತಿ ದಿನ ಆಹಾರ ವಿತರಣೆ ಬಗ್ಗೆ ಮಾಜಿ ಸಚಿವರು ಮಾಹಿತಿ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು