9:06 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

29/09/2022, 21:19

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.  ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು