2:56 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ

02/10/2022, 15:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.

ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು