ಇತ್ತೀಚಿನ ಸುದ್ದಿ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಸ್ಪಷ್ಟನೆ
17/01/2025, 19:29
ಬೆಳಗಾವಿ(reporterkarnataka.com):
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಬದಲಾವಣೆ ಸದ್ಯಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ
ಸುರ್ಜೇವಾಲ ಅವರು,ಡಿ. ಕೆ. ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೆ. ಎನ್. ರಾಜಣ್ಣ ಅವರ ಬೇಡಿಕೆಗೆ ಹಿನ್ನಡೆಯುಂಟಾಗಿದೆ.
ಕಾಂಗ್ರೆಸ್ ನ ಹಿರಿಯ ನಾಯಕರುಗಳ ನಡುವಿನ ಭಿನ್ನಮತ ಪರಿಹರಿಸಲು ಸುರ್ಜೇವಾಲ ಇಲ್ಲಿಗಾಗಮಿಸಿದ್ದಾರೆ.