ಇತ್ತೀಚಿನ ಸುದ್ದಿ
ಕೆಪಿಸಿಸಿ ಕಚೇರಿಯಲ್ಲಿ ಅಗಲಿದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಗೆ ಶ್ರದ್ಧಾಂಜಲಿ: ಗಣ್ಯರಿಂದ ನುಡಿನಮನ
13/09/2021, 22:31
ಬೆಂಗಳೂರು(reporterkarnataka.com): ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತಿತರರು ಆಸ್ಕರ್ ಫರ್ನಾಂಡೀಸ್ ಅವರ ಭಾವಚಿತ್ರಕ್ಕೆ ಪುಷ್ಪ, ನುಡಿನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಧೃವನಾರಾಯಣ್, ಸಲೀಂ ಅಹಮದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ತುಕರಾಂ, ಪಿ.ಟಿ. ಪರಮೇಶ್ವರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.