3:54 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈಗೆ ಜೀವ ಬೆದರಿಕೆ: ಕೊಲೆ ಮಾಡುವುದಾಗಿ ವಾಟ್ಸಾಪ್ ಗ್ರೂಪ್ ನಲ್ಲಿ ಎಚ್ಚರಿಕೆ

14/03/2023, 18:28

ಮಂಗಳೂರು(reporterkarnataka.com) : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ
ಮಿಥುನ್ ರೈ ಅವರಿಗೆ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಕುರಿತು ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಬ್ಲಾಕ್ ಕಾಂಗ್ರೆಸ್
ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈ ಅವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ವಿಚಾರವನ್ನೊಳಗೊಂಡ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯ ಪೋಸ್ಟ್ ಗಳನ್ನು ಹಾಕುತ್ತಿರುವ ವ್ಯಕ್ತಿಗಳು ಹಾಗೂ ಹನಿ ಹಿಂದೂಸ್ತಾನಿ ಮುಂಬೈ ಅವರನ್ನು ಪತ್ತೆಹಚ್ಚಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಕೂಡಲೇ ಮಿಥುನ್ ರೈಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು