3:30 AM Thursday17 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

KPCC Working President | ಕೇಂದ್ರವನ್ನು ಪ್ರಶ್ನಿಸುವ ತಾಕತ್ತು ಬಿಜೆಪಿಗರಿಗಿಲ್ಲ: ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

09/04/2025, 18:34

ಮಂಗಳೂರು(reporterkarnataka.com): ರಾಜ್ಯ ಸರಕಾರ ಹಾಗೂ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆ ಹಾಸ್ಯಾಸ್ಪದವಾಗಿದ್ದು, ನಿಜವಾಗಿಯೂ ಬಿಜೆಪಿಗರಿಗೆ ಈ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಕಾಳಜಿಯಿದ್ದರೆ ಕೇಂದ್ರ ಸರಕಾರ ವಿರುದ್ಧ ಪ್ರತಿಭಟನೆ ನಡೆಸಲಿ. ಬಿಜೆಪಿ ನಾಯಕರಿಗೆ ಪ್ರತಿಭಟನೆ ಬಿಡಿ, ಕೇಂದ್ರ ನಾಯಕರ ವಿರುದ್ಧ ಉಸಿರೆತ್ತುವ ತಾಕತ್ತು ಇಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಲೇವಡಿ ಮಾಡಿದರು.
ಕೇಂದ್ರ ಸರಕಾರ ಅಡುಗೆ ಸಿಲಿಂಡರ್ ದರವನ್ನು 50 ರೂ. ಏರಿಕೆ ಮಾಡಿದೆ. ಭರವಸೆಗಳ ಸುರಿಮಳೆಯನ್ನೇ ಸುರಿಸಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲವನ್ನೂ ಮರೆತುಬಿಟ್ಟು, ಬೆಲೆ ಏರಿಕೆಯ ಬರೆಯನ್ನು ಮತದಾರನಿಗೆ ನೀಡುತ್ತಿದೆ. ಕಚ್ಚಾ ತೈಲದ ಬೆಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಡಿಮೆಯಿದ್ದರೂ ದೇಶದಲ್ಲಿ ಕಚ್ಚಾತೈಲ ದರ ಕಡಿಮೆ ಮಾಡದೆ ಜನರನ್ನು ವಂಚಿಸಿದೆ. ಜಿಎಸ್‌ಟಿ ಹೊರೆಯನ್ನು ಜನರಿಗೆ ಹಾಕಿ ಸುಲಿಗೆ ಮಾಡಿದ್ದಲ್ಲದೆ ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲನ್ನು ಸಮರ್ಪಕವಾಗಿ ನೀಡುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಬರಬೇಕಾದ ಹಣವನ್ನು ಕೇಂದ್ರ ನೀಡಿಲ್ಲ. ರಾಜ್ಯ ಬಿಜೆಪಿರಿಗೆ ರಾಜ್ಯದ ಜನರ ಬಗ್ಗೆ ಹಾಗೂ ಅಭಿವೃದ್ಧಿಯ ಬಗ್ಗೆ ಕಾಳಜಿಯಿದ್ದರೆ ಹೊಸದಿಲ್ಲಿಗೆ ತೆರಳಿ ಜನಾಕ್ರೋಶ ಯಾತ್ರೆ ಮಾಡಲಿ ಎಂದು ಸವಾಲೆಸೆದರು.
ರಾಜ್ಯದಲ್ಲಿ ಗ್ರಾರಂಟಿ ಯೋಜನೆ ಅನುಷ್ಠಾನವಾದ ಬಳಿಕ ಜನಸಾಮಾನ್ಯರ ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತಿದೆ. ಸವದತ್ತಿ ಚಿಕ್ಕೊಪ್ಪ ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಪೃಥ್ವಿ ಹೋಳಿ ಗೃಹಲಕ್ಷ್ಮಿ ಹಣದಿಂದ ಶಿಕ್ಷಣ ಕಲಿತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿರುವುದು ಇದಕ್ಕೆ ನಿದರ್ಶನ. ಇದೇ ರೀತಿ ಕೋಟ್ಯಂತರ ಕುಟುಂಬಗಳಿಗೆ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಅನುಕೂಲ ಮಾಡಿಕೊಟ್ಟಿದೆ. ಇದರಿಂದ ಗ್ರಾಮ ಗ್ರಾಮಗಳಲ್ಲಿ ಆರ್ಥಿಕ ಚೈತನ್ಯ ಸೃಷ್ಟಿಯಾಗಿದೆ, ಅಭಿವೃದ್ಧಿ ಕಾಣುತ್ತಿದೆ. ಗ್ಯಾರಂಟಿ ಯೋಜನೆಯಿಂದ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿ ಕಾಣುತ್ತಿದೆ. ಗ್ಯಾರಂಟಿ ಯೋಜನೆಗೆ ಜನಸಾಮಾನ್ಯರ ಸ್ಪಂದನೆ ಹಾಗೂ ರಾಜ್ಯ ಸರಕಾರದ ಪರ ಜನರ ಒಲವನ್ನು ಕಂಡು ಬಿಜೆಪಿ ನಾಯಕರು ತಲ್ಲಣಗೊಂಡಿದ್ದು ಜನಾಕ್ರೋಶ ಮೂಲಕ ಜನರನ್ನು ಹಾದಿತಪ್ಪಿಸುವ ಹುನ್ನಾರ ನಡೆಸುತ್ತಿದ್ದಾರೆ. ರಾಜ್ಯದ ಜನತೆ ಬುದ್ಧಿವಂತರು, ಬಿಜೆಪಿಯ ಟೀಮ್ ನ ಯಾವ ನಾಟಕನೂ ಫಲ ಕೊಡಲ್ಲ ಎಂದು ಮಂಜುನಾಥ ಭಂಡಾರಿ ಪ್ರತಿಕ್ರಿಯಿಸಿದ್ದಾರೆ.
*ಬಿಜೆಪಿ ನಾಟಕ ಕಂಪನಿ:* ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ನಾನಾ ಬಂಡಾಯ ಬಣಗಳಿದ್ದು, ಒಂದೊಂದು ನಾಟಕ ಕಂಪನಿಗಳಂತಾಗಿದೆ. ಬಿಜೆಪಿಯಲ್ಲಿ ನೇರಾ-ನೇರ ಮಾತನಾಡುವವರನ್ನು ಪಕ್ಷದಿಂದ ದೂರವಿಡುತ್ತಾರೆ. ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಬಂಡಾಯ ನಾಯಕರು ಹುಟ್ಟಿಕೊಳ್ಳಲಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು