3:16 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ

29/08/2025, 19:50

ಬೆಂಗಳೂರು(reporterkarnataka.com): ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.
ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.
ರಾಜ್ಯದಾದ್ಯಂತ ಕೆಪಿಟಿಸಿಎಲ್ ಉದ್ಯೋಗದ ಭರವಸೆಯಲ್ಲಿದ್ದ 2600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇ ತಿಂಗಳಿನಲ್ಲಿ ನಡೆದಿದ್ದ ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದಾದ ಎರಡು ತಿಂಗಳಲ್ಲೇ ನಿಗಮ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಂಧನ ಇಲಾಖೆಯು ಉದ್ಯೋಗದ ಗ್ಯಾರಂಟಿ ನೀಡಿದೆ.
ಉಳಿದಂತೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು