6:13 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕ್ರೀಡಾ ವರದಿಗಾರಿಕೆ: ಜಗದೀಶ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿ ಪ್ರದಾನ

01/03/2023, 11:12

ಮಂಗಳೂರು(reporterkarnataka.com): ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕ್ರೀಡಾ ವರದಿಗಾರಿಕೆಗಾಗಿ ನೀಡಿದ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿಯನ್ನು ಕನ್ನಡ ಸಿನಿಮಾ ರಂಗದ ಹಿರಿಯ ನಟ ದೊಡ್ಡಣ್ಣ ಅವರು ಪ್ರದಾನ ಮಾಡಿದರು.

30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಇವರು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,‌ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ ರಾವ್, ಕರ್ಣಾಟಕ ಬ್ಯಾಂಕ್ ಚೇರ್ ಮನ್ ಮಹಾಬಲೇಶ್ವರ ರಾವ್ , ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಪ್ರದೀಪ್ ಕುಮಾರ್ ಕಲ್ಕೂರ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು , ಹಿರಿಯ ಸಾಹಿತಿ ಇರಾ ನೇಮು ಪೂಜಾರಿ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ , ಸಂಚಾಲಕಿ ಲತಾ ಕೃಷ್ಣದಾಸ್ , ಯುಗಪುರುಷ ಮಾಸ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು