6:09 AM Wednesday4 - December 2024
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ… ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ… ನಿಡುವಾಳೆ ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ: ಬೆಳಗಿದ 3 ಸಾವಿರಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಕ್ರೀಡೆಯಿಂದ ದೈಹಿಕ-ಮಾನಸಿಕ ಆರೋಗ್ಯ ವೃದ್ಧಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

28/11/2024, 15:38

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmal.com

ದೈನಂದಿನ ಜೀವನದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಕ್ರೀಯವಾಗಿ
ತೊಡಗಿಸಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟಗಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆ ಎಂಬುದು ಕೇವಲ ಆಟದ ಸಂದರ್ಭವಲ್ಲದೇ, ತಂಡ ನಿರ್ವಹಣೆ, ಪರಿಶ್ರಮ ಹಾಗೂ ಶಿಸ್ತಿನ ಕ್ರಮವಾಗಿದೆ. ಪ್ರತಿನಿತ್ಯ 30 ರಿಂದ 40 ನಿಮಿಷಗಳ ಕಾಲ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆಯು ಉತ್ತಮ ಆರೋಗ್ಯ ರೂಪಿಸಿಕೊಳ್ಳುವ ಪ್ರಮುಖ ಆಯಾಮವಾಗಿದೆ ಎಂದರು.
ಪ್ರತಿವರ್ಷದಂತೆ ಈ ವರ್ಷವೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಕ್ರೀಡಾಕೂಟ ಆಯೋಜನೆ ಮಾಡಿರುವುದು ಸಂತಸ ತಂದಿದೆ. ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಹಗಲು-ಇರುಳು ಎನ್ನದೇ ಕರ್ತವ್ಯನಿರತರಾಗಿರುತ್ತಾರೆ. ತಮ್ಮ ಕೆಲಸಗಳ ಒತ್ತಡವನ್ನು ನಿಗ್ರಹಿಸಿಕೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಪ್ರತಿಯೊಬ್ಬ ಕ್ರೀಡಾಪಟುವು ಕ್ರೀಡೆಯಲ್ಲಿ ತಮ್ಮ ಎಲ್ಲಾ ಮಾನಸಿಕ ಒತ್ತಡಗಳನ್ನು ಮರೆತು, ವಿವಿಧ ಆಟಗಳಲ್ಲಿ ಮಜ್ಞರಾಗಿ ಪಾಲ್ಗೊಳ್ಳುವ ಮೂಲಕ ಕ್ರೀಡೆಗಳಲ್ಲಿ ಉತ್ಸುಕತೆಯಿಂದ ಭಾಗವಹಿಸಬೇಕು ಎಂದು ಶುಭ ಹಾರೈಸಿದರು.
*ವಿವಿಧ ತಂಡ:* ಪೊಲೀಸ್ ವಾರ್ಷಿಕ ಕ್ರೀಡಾಕೂಟ-2024ರಲ್ಲಿ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳಿಗೆ ಪ್ರತ್ಯೇಕವಾಗಿ ಕ್ರಿಕೇಟ್, ವಾಲಿಬಾಲ್, ಕಬ್ಬಡ್ಡಿ, ಟೇಬಲ್ ಟೆನ್ನಿಸ್, ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಹಗ್ಗ ಜಗ್ಗಾಟ ಹಾಗೂ ಗುಂಡು ಹಾರಿಸುವ (ಫೈರಿಂಗ್) ಕ್ರೀಡೆಗಳನ್ನು ಆಯೋಜಿಸಿದ್ದು, ತುಂಗಾ ಡಿಎಆರ್ ತಂಡ, ಕೋಟೆ ಬಳ್ಳಾರಿ ನಗರ ತಂಡ, ದುರ್ಗಾ ಮಹಿಳಾ ತಂಡ, ವೇದಾವತಿ ಸಿರುಗುಪ್ಪ ತಂಡ, ಸ್ಕಂದಗಿರಿ ತೋರಣಗಲ್ಲು ತಂಡ, ಸಂಸ್ಕೃತಿ ಲಿಪಿಕ ಸಿಬ್ಬಂದಿ ವರ್ಗ ತಂಡ ಸೇರಿ ಆರು ತಂಡಗಳಿಂದ 120ಕ್ಕೂ ಹೆಚ್ಚಿನ ಕ್ರೀಡಾಪಟುಳು ಭಾಗವಹಿಸಿದ್ದರು.
*ಆಕರ್ಷಕ ಪಥ ಸಂಚಲನ:* ಜಿಲ್ಲಾ ಪೊಲೀಸ್ ವಾರ್ಷಿಕ-2024 ಕ್ರೀಡಾಕೂಟದಲ್ಲಿ ಆರು ತಂಡಗಳ ಬಾವುಟಗಳೊಂದಿಗೆ ಕ್ರೀಡಾಪಟುಗಳ ಪಥ ಸಂಚಲನವು ಆಕರ್ಷಕವಾಗಿತ್ತು ಹಾಗೂ ಕ್ರೀಡಾಜ್ಯೋತಿಯೊಂದಿಗೆ ಮೈದಾನದಲ್ಲಿ ಸಂಚರಿಸಿ, ವೇದಿಕೆಯ ಮುಂಭಾಗ ತಲುಪಿ ನಿರ್ಗಮನಗೊಂಡಿತು. ಇದೇ ವೇಳೆ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ ವಿ.ಜೆ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್.ಎನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು