12:00 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡಿ ರೈತರ ಆದಾಯ ದ್ವಿಗುಣಗೊಳಿಸಬೇಕು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

22/10/2021, 22:25

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ರೈತರ ಬೆಳೆದ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡುವ ಮೂಲಕ ರೈತರ ಆದಾಯವನ್ನು ದ್ವಿಗುಣಗೊಳಿಸಬೇಕು ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇಂದು ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ , ಬಾಗಲಕೋಟೆ , ಭಾರತೀಯ ಕೃಷಿ ಅನುಸಂಧಾನ ಪರಿಷತ್ತು , ನವದೆಹಲಿ , ಐ.ಸಿ.ಎ.ಆರ್ . ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಕೆವಿಕೆ ನೂತನ ಆಡಳಿತ ಭವನದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ನೀರು ಹಾಗೂ ಮಣ್ಣಿನ ಗುಣಮಟ್ಟದ ಪರೀಕ್ಷೆಗಳನ್ನು ಕೃಷಿ ವಿಜ್ಞಾನ ಕಟ್ಟಡಗಳಲ್ಲಿ ನಡೆಸಲಾಗುತ್ತದೆ. ಮಣ್ಣಿನ ಪರೀಕ್ಷೆ ಮಾಡಿ ಯಾವ ಮಣ್ಣಿನಲ್ಲಿ ಯಾವ ಬೆಳೆಯನ್ನು ಬೆಳೆಯಬೇಕು ಎಂದು ಪರೀಕ್ಷಿಸಿ ಬೆಳೆಯುವುದರಿಂದ ಉತ್ತಮ ಬೆಳೆ ಬೆಳೆಯಬಹುದು ಎಂದು ಅವರು ತಿಳಿಸಿದರು . ಸಸ್ಯಗಳಿಗೆ ಬರುವ ರೋಗದ ಮೂಲವನ್ನು ಕಂಡುಹಿಡಿದು ಪರಿಹರಿಸಬೇಕು . ಮಣ್ಣಿನ ಆರೋಗ್ಯ ಪರೀಕ್ಷೆ ಕಾರ್ಡ್ ಗಳನ್ನು ರೈತರಿಗೆ ನೀಡಲಾಗುತ್ತಿದೆ . ಕೋಲಾರದಲ್ಲಿ ಫ್ಲೋರೈಡ್ ಇರುವ ನೀರು ಹೆಚ್ಚಾಗಿದೆ . ಜಿಲ್ಲೆಯ ರೈತರು ಮಳೆ ಆಧಾರಿತ ಕೃಷಿಯನ್ನು ಅವಲಂಬಿಸಿದ್ದಾರೆ . ಮಳೆ ನೀರನ್ನು ಕೃಷಿ ಹೊಂಡಗಳಲ್ಲಿ ಸಂಗ್ರಹಿಸಿ ಬಳಸುತ್ತಾರೆ . ಇಸ್ರೇಲ್ ತಂತ್ರಜ್ಞಾನವನ್ನು ಬಳಸಿ ಜಿಲ್ಲೆಗಳಲ್ಲಿ ಕೃಷಿಯನ್ನು ಮಾಡುತ್ತಾರೆ . ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಕಡಿಮೆ ಪ್ರದೇಶದಲ್ಲಿ ಹೆಚ್ಚು ಉತ್ಪಾದನೆಯನ್ನು ಮಾಡಬೇಕು ಎಂದು ತಿಳಿಸಿದರು .

ಈ ವರ್ಷ ಕೇಂದ್ರ ಸರ್ಕಾರ 1.31 ಲಕ್ಷ ಕೋಟಿಯನ್ನು ಬಜೆಟ್ ನಲ್ಲಿ ಕೃಷಿಗೆ ನೀಡಲಾಗಿದೆ . ಟೋಮೆಟೊ ಬೆಳೆಯನ್ನು ದೇಶ – ವಿದೇಶಗಳಲ್ಲಿ ರಫ್ತು ಮಾಡಬೇಕು . ದೇಶದಲ್ಲಿ 305 ಮೆಟ್ರಿಕ್ ಮಿಲಿಯನ್ ಟನ್ ದವಸದಾನ್ಯ , 325 ಮೆಟ್ರಿಕ್ ಮಿಲಿಯನ್ ಟನ್ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯುತ್ತಿದ್ದೇವೆ. ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ನಾವು ಸ್ವಾವಲಂಬನೆಯನ್ನು ಸಾಧಿಸಬೇಕಿದೆ . 2023 ರನ್ನು ವಿಶ್ವ ಸಂಸ್ಥೆಯು ಭಾರತದ ಕೋರಿಕೆಯ ಮೇರೆಗೆ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದೆ . ರೈತರು ತಮ್ಮ ಕೃಷಿಯ ಜೊತೆಗೆ ಜೇನು , ಮೀನು , ಜಾನುವಾರುಗಳ ಸಾಕಾಣಿಕೆಯನ್ನು ಮಾಡಬೇಕು . ಬೆಳೆ ವಿಮೆ ಯೋಜನೆ ಮತ್ತು ಇತರೆ ಎಲ್ಲಾ ಯೋಜನೆಗಳನ್ನು ರೈತರು ಉಪಯೋಗಿಸಿಕೊಳ್ಳಬೇಕು ಎಂದು ತಿಳಿಸಿದರು . ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಮುನಿಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ , ಜಿಲ್ಲೆಯ ರೈತರು ಶ್ರಮ ಜೀವಿಗಳು . ದೇಶದ ಬೆನ್ನೆಲುಬು ರೈತ . ಅವರ ಆದಾಯ ದ್ವಿಗುಣಗೊಳಿಸಲು ಪ್ರಧಾನಮಂತ್ರಿಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ . ಇಸ್ರೇಲ್ ಪ್ರಪಂಚಕ್ಕೆ ಮಾದರಿಯಾಗಿದ್ದರೆ , ಕೃಷಿಯಲ್ಲಿ ಕೋಲಾರ ದೇಶಕ್ಕೆ ಮಾದರಿಯಾಗಿದೆ . ಅಧಿಕಾರಿಗಳು ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಬೇಕು . ಮಾವು ಮತ್ತು ಇತರೆ ಬೆಳೆಗಳನ್ನು ಉತ್ತಮ ಬೆಲೆಗೆ ಮಾರಾಟ ಮಾಡಲು ದೆಹಲಿಗೆ ಕಳುಹಿಸಲು ಕಿಸಾನ್ ರೈಲುನ್ನು ದೆಹಲಿಗೆ ಬಿಡಲಾಯಿತು . 40 ಎಕರೆ ಪ್ರದೇಶದಲ್ಲಿ ಎ.ಪಿ.ಎಂ.ಸಿ. ಯನ್ನು ಹೊಸದಾಗಿ ಮಾಡಿ ಕೋಲ್ಡ್ ಸ್ಟೋರೇಜ್ ಗಳನ್ನು ಸ್ಥಾಪಿಸಲಾಗುವುದು . ಪಂಚಾಯಿತಿಗೊಂದು , ಎಫ್ ಪಿಓ ಅನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು . ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಶ್ರೀನಿವಾಸಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ,, ರೈತರ ಪ್ರತಿ ಬೆಳೆಗೂ ಕನಿಷ್ಠ ಬೆಲೆಯನ್ನು ನಿಗದಿಪಡಿಸಬೇಕು . ರೈತರಿಗೆ ಉತ್ತಮ ಆದಾಯ ತಂದುಕೊಡುವ ಯೋಜನೆಗಳನ್ನು ಸರ್ಕಾರ ಜಾರಿಗೆ ತರಬೇಕು ಎಂದು ತಿಳಿಸಿದರು . ವಿಧಾನಪರಿಷತ್ ಶಾಸಕರಾದ ವೈ ಎ ನಾರಾಯಣಸ್ವಾಮಿ ಅವರು ಮಾತನಾಡಿ , ಎರಡು ಮೂರು ರಾಜ್ಯಕ್ಕೆ ಆಗುವಷ್ಟು ಹಣ್ಣು – ತರಕಾರಿಗಳನ್ನು ಕೋಲಾರ ಜಿಲ್ಲೆಯಲ್ಲಿ ಬೆಳೆಯಲಾಗುತ್ತಿದೆ . 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತೇವೆ . ಒಂದು ಬೆಳೆ ಒಂದು ಉತ್ಪನ್ನ. ಯೋಜನೆಯಡಿ ಜಿಲ್ಲೆಯ ಟೊಮೊಟೊ ಬೆಳೆಯನ್ನು ಆಯ್ಕೆ ಮಾಡಲಾಗಿದೆ ಹನಿ ನೀರಾವರಿ ಪದ್ಧತಿಯನ್ನು ಕೋಲಾರ ಜಿಲ್ಲೆಯಲ್ಲಿ ಹೆಚ್ಚು ಅಳವಡಿಸಿಕೊಳ್ಳಲಾಗಿದೆ . ಪಿಎಂ ಕಿಸಾನ್ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದರು . ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಗೋವಿಂದರಾಜು , ಐ.ಸಿ.ಎ.ಆರ್ ಕಾರ್ಯದರ್ಶಿಗಳು , ಕೃಷಿ ಸಂಶೋಧನೆ ಮತ್ತು ಶಿಕ್ಷಣ ಇಲಾಖೆ ಮತ್ತು ಮಹಾನಿರ್ದೇಶಕರಾದ ಡಾ . ತ್ರಿಲೋಚನ ಮೊಹಪಾತ್ರ , ಜಿಲ್ಲಾಧಿಕಾರಿಗಳಾದ ಡಾ.ಆರ್ ಸೆಲ್ವಮಣಿ , ಜಿಲ್ಲಾ ಪಂಚಾಯತ್ ಮುಖ್ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್‌ ಕುಮಾರ್‌ , ನಗರಸಭಾ ಅಧ್ಯಕ್ಷರಾದ ಶ್ವೇತಾ ಆರ್ ಶಬರೀಶ್ , ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ , ಸೇರಿದಂತೆ ಕೃಷಿ , ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮತ್ತು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು