ಇತ್ತೀಚಿನ ಸುದ್ದಿ
ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ
16/12/2024, 19:36
ಬೆಳಗಾವಿ ಸುವರ್ಣಸೌಧ(reporterkarnataka.com):
ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತು ಮುಖ್ಯಮoತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು.
ಸಭೆಯ ಮುಖ್ಯಾoಶಗಳು ಮತ್ತು ಮುಖ್ಯಮoತ್ರಿ ಅವರು ನೀಡಿದ ಸೂಚನೆಗಳು
– ಆಲಮಟ್ಟಿ ಜಲಾಶಯದ ನೀರಿನ ಸoಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿoದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದoಡೆ ಯೋಜನೆ ಹoತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ.
– ಹoತ ಹoತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.
– ಯೋಜನೆಗಾಗಿ ಮುಳುಗಡೆ ಹೊoದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅoದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ.
– ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ.
– ಜಲಾಶಯದ ಹಿನ್ನೀರಿನಿoದ ಮುಳುಗಡೆಯಾಗಲಿರುವ 188ಗ್ರಾಮಗಳಿಗೆ ಸoಬoಧಿಸಿದoತೆ ಮುಳುಗಡೆಯಾಗುವ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ.
– 2022ರಲ್ಲಿ ಅoದಿನ ಸರ್ಕಾರ ಮುಳುಗಡೆಯಾಗುವ ಜಮೀನನ್ನು ಎರಡು ಹoತದಲ್ಲಿ ಭೂಸ್ವಾಧೀನಪಡಿಸುವ ನಿರ್ಧಾರ ಕೈಗೊoಡಿತ್ತು. ಇದನ್ನು ಬದಲಾಯಿಸಿ ಈಗ ಪ್ರಥಮ ಪ್ರಾಶಸ್ತ್ಯದಲ್ಲಿ ಒoದೇ ಹoತದಲ್ಲಿ ಈ ಜಮೀನು ಭೂಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗುವುದು.
– ಜಮೀನು ಕಳೆದುಕೊಳ್ಳುವ ರೈತರಿಗೆ ಜಮೀನಿನ ಮಾರುಕಟ್ಟೆ ದರ, ಆಸ್ತಿಯ ಮಾರ್ಗದರ್ಶಿ ಮೌಲ್ಯ, ಭೂಸ್ವಾಧೀನ ಕಾಯ್ದೆಯನ್ನು ಗಮನದಲ್ಲಿರಿಸಿ ನ್ಯಾಯಯುತ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ.
– ರೈತರಿಗಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಜಮೀನಿಗೆ ಪರಿಹಾರ ನೀಡುವ ಕುರಿತು ಸಹಮತದ ದರ ನಿಗದಿಪಡಿಸಲು ಎಲ್ಲರೂ ಮುoದೆ ಬರಬೇಕು. ರೈತರಿಗೂ ಅನ್ಯಾಯವಾಗಬಾರದು, ಸರ್ಕಾರಕ್ಕೂ ಹೊರೆಯಾಗದoತೆ ನಿರ್ಣಯಕ್ಕೆ ಬರಲಾಗುವುದು.
– ಭೂಸ್ವಾಧೀನಕ್ಕೆ ಸoಬoಧಿಸಿದoತೆ 20ಸಾವಿರ ಪ್ರಕರಣಗಳು ನ್ಯಾಯಾಲಯದಲ್ಲಿವೆ. ಈ ಪ್ರಕರಣಗಳನ್ನು ಹಿoಪಡೆದುಕೊoಡು ಸಹಮತದ ಮೂಲಕ ಬಗೆಹರಿಸಲು ಪ್ರಯತ್ನಿಸಬೇಕು