ಇತ್ತೀಚಿನ ಸುದ್ದಿ
ಕೃಷ್ಣಾ ನದಿ ಪ್ರವಾಹಪೀಡಿತರಿಗೆ ಶೀಘ್ರದಲ್ಲೇ ಪುನರ್ವಸತಿ: ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅಭಯ
01/09/2021, 18:47
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಕೃಷ್ಣಾ ನದಿ ಪ್ರವಾಹದಿಂದ ಸಂತ್ರಸ್ತಗೊಂಡ ಅಥಣಿಯ ನಂದೇಶ್ವರ ಗ್ರಾಮದ ಪುನರ್ವಸತಿ ಕೇಂದ್ರದ ಕುರಿತು ಸ್ಥಳೀಯ ಶಾಸಕರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ತ್ವರಿತವಾಗಿ ಪುನರ್ವಸತಿ ಕೇಂದ್ರವನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಗುವುದು. ಹಾಗೆ ಪ್ರವಾಹ
ಪರಿಹಾರವನ್ನು ಫಲಾನುಭವಿಯ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.
ಪ್ರವಾಹ ಸಂತ್ರಸ್ತರು ನಡೆಸುತ್ತಿರುವ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಹಿಪ್ಪರಗಿ ಆಣೆಕಟ್ಟು ಹಿನ್ನೀರಿನ ಸಂಘದ ಅಧ್ಯಕ್ಷ ರಮೇಶ್ ಗೌಡ ಪಾಟೀಲ್ ಮಾತನಾಡಿ, ಕೃಷ್ಣಾ ನದಿ ಪ್ರವಾಹದ ಹಿನ್ನೆಲೆಯಲ್ಲಿ ಸುಮಾರು ಹಳ್ಳಿಗಳು ಜಲಾವೃತಗೊಂಡ ಕಾರಣ 2005ರಲ್ಲಿ ಪ್ರವಾಹ ಬಂದ ಸಂದರ್ಭದಲ್ಲಿ ಸರ್ಕಾರ ನೀಡಿದ ಆಶ್ವಾಸನೆಯಂತೆ 2006ರಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ ಬಿಡಬೇಕಿತ್ತು. ಆದರೆ ಇದುವರೆಗೂ ಸರ್ಕಾರ ಇತ್ತ ಕಡೆ ಗಮನ ಹರಿಸಿಲ್ಲ. ಇನ್ನಾದರೂ ಆದಷ್ಟು ನಮಗೆ ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದರು.