3:39 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕೃಷ್ಣಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆ ಸಾವು: ಅಗ್ನಿಶಾಮಕ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಿದರೂ ಪ್ರಾಣಪಕ್ಷಿ ಹಾರಿ ಹೋಗಿತ್ತು!

28/04/2023, 00:00

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯರೊಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ರಾಜೇಶ್ರೀ ಮನೋಜ ಮನಪಗೊಳ (43) ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಮಹಿಳೆ ಎಂದು ಗುರುತಿಸಲಾಗಿದೆ.
ಸ್ಥಳೀಯರು ಅಗ್ನಿಶಾಮಕ ಸ್ಥಳಕ್ಕೆ ಕರೆ ಮಾಡಿ ತಿಳಿಸಿದ ಕೇವಲ ಏಳೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಹೊರತೆಗೆಯಲು ಕೇವಲ ಐದೇ ನಿಮಿಷ ತೆಗೆದುಕೊಂಡರು ಅಷ್ಟರಲ್ಲಿ ಆ ಮಹಿಳೆಯ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಮಹಿಳೆಯ ದುರದೃಷ್ಟ. ಮೃತ ಮಹಿಳೆಯನ್ನು ಅಷ್ಟೊಂದು ಶೀಘ್ರವಾಗಿ ಪತ್ತೆ ಹಚ್ಚಿದ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು
ಅಗ್ನಿಶಾಮಕ ಸಿಬ್ಬಂದಿಗಳಾದ ಪ್ರಭಾರ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ಬೀ ಬಂದಾಲ. ವಾಹನ ಚಾಲಕರಾದ ಎಂ ಎಸ್ ಕುಂಬಾರ. ಎಸ್ ಡಿ ಹಮಾಪುರ. ಶಿವಯ್ಯ ಮಠಪತಿ ಸಿಬ್ಬಂದಿಗಳು ಭಾಗವಹಿಸಿದರು.
ಈ ಕುರಿತು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು