8:22 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ

ಇತ್ತೀಚಿನ ಸುದ್ದಿ

ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು ನಡೆಯಲಿತ್ತು ವಿವಾಹ

21/10/2024, 11:31

ಮಂಗಳೂರು(reporterkarnataka.com): ಮದುವೆ ನಿಶ್ಚಿತಾರ್ಥವಾದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಗರದ ನಂತೂರು ಸಮೀಪದ ಬಜ್ಜೋಡಿ ಬಳಿ ನಡಿದೆ.

ಕೋಡಿಕಲ್‌ನ ಕ್ರಿಸ್ಟಿ ಕ್ರಾಸ್ತಾ (27) ಮೃತಟ್ಟ ಯುವತಿ. ಭಾನುವಾರ ಸಂಜೆ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಕ್ರಿಸ್ಟಿ ಕ್ರಾಸ್ತಾ ಅವರು ಕಂಕನಾಡಿ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದರು. ಭಾನುವಾರ ಸಂಜೆ ಆಸ್ಪತ್ರೆಯತ್ತ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ನಂತೂರು ಜಂಕ್ಷನ್ ಸಮೀಪದ ಬಜ್ಜೋಡಿ ತಲುಪಿದಾಗ ಸ್ಕೂಟರ್‌ಗೆ ಕೇರಳ ಕಡೆಗೆ ತೆರಳುತ್ತಿದ್ದ ಮೀನು ತುಂಬಿದ ಲಾರಿಯು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಕ್ರಿಸ್ಟಿ ಕ್ರಾಸ್ತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಿಸ್ಟಿ ಅವರಿಗೆ ಮದುವೆ ನಿಶ್ಚಿತವಾಗಿತ್ತು. ನವೆಂಬರ್ 23 ರಂದು ಅವರು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು