7:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು

15/09/2021, 14:04

ಮಂಗಳೂರು(Reporterkarnataka.com)

ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ.

ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದಲ್ಲಿ ವಾರಣಾಸಿ ಪಾರ್ಮ್ ಹೌಸಿಗೆ ಕೆಲವು ದಿನಗಳ ಹಿಂದೆ ಆಗಮಿಸಿದ್ದರು.

ಫಾರ್ಮ್​ ಹೌಸ್​ನಲ್ಲಿ ನೀರಿನ ಕೆರೆ ನೋಡಿದ ಮೈಜಿ ಸ್ವಿಮ್ಮಿಂಗ್​ ಡ್ರೆಸ್​ ಧರಿಸಿ ಈಜಲೆಂದು ನೀರಿಗೆ ಇಳಿದಿದ್ದು, ಬಹಳ ಸಮಯ ಕಳೆದರೂ ಮರಳಿ ಬಾರದ ವೇಳೆ ಈಜು ಕಲಿಯುವ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಬಳಿಕ ಕೆರೆಯ ಬಳಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ದೇಹ ಪತ್ತೆಯಾಗಿದೆ.

ಡಾ.ಮೈಜೀ ಕರೋಲ್ ಫರ್ನಾಂಡಿಸ್ ಸಾವಿನ ಬಗ್ಗೆ ಆಕೆಯ ಸಹೋದರಿ ಡಯಾನ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಠಾಣಾ ಪೊಲೀಸರು ಮಾಹಿತಿ ತಿಳಿದ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು